ಪೇ ಸಿಎಂ ಅಭಿಯಾನ- ಕಾಂಗ್ರೆಸ್ಸಿನದು ಡರ್ಟಿ ಪಾಲಿಟಿಕ್ಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Prasthutha|

ಚಿತ್ರದುರ್ಗ: ಪೇ ಸಿಎಂ ಅಭಿಯಾನ ಮಾಡುತ್ತಿರುವ ಕಾಂಗ್ರೆಸ್ಸಿನದ್ದು ಡರ್ಟಿ ಪಾಲಿಟಿಕ್ಸ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

- Advertisement -

ಇಂದು ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದಾದರೂ ವಿಚಾರವಿದ್ದರೆ ನೇರವಾಗಿ ಮಾತಾನಾಡಬೇಕು ಮತ್ತು ದಾಖಲೆ ನೀಡಬೇಕು ಹಾಗೂ ತನಿಖೆಯಾಗಬೇಕು. ಯಾವುದೇ ವಿಚಾರವಿಲ್ಲದೆ, ಪೂರ್ಣಪ್ರಮಾಣದ ತಯಾರಿ ಇಲ್ಲದೆ ಸದನಕ್ಕೆ ಬರುತ್ತಾರೆ. ಇದು ಅವರ ನೈತಿಕತೆಯ ಅಧ:ಪತನ ತೋರಿಸುತ್ತದೆ. ನೈತಿಕತೆ ಇಲ್ಲದೆ ಹೆಸರು ಕೆಡಿಸುವ ಕಾರ್ಯಕ್ರಮವಿದು ಎಂದರು.

ಜನಪರ ಕಾಳಜಿ ಇಲ್ಲದೆ ಡರ್ಟಿ ಪಾಲಿಟಿಕ್ಸ್ ಮಾಡಿಕೊಂಡು ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ. ಇದೆಲ್ಲಾ ಕರ್ನಾಟಕದಲ್ಲಿ ಸಾಧ್ಯವಿಲ್ಲ. ಸರ್ಕಾರ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.

- Advertisement -

ಲಿಂಗಾಯತ ಸಮುದಾಯದ ಮುಖ್ಯ ಮಂತ್ರಿಗಳನ್ನು ಗುರಿಯಾಗಿಸಲಾಗಿದೆ ಎಂದು ಸಚಿವ ಡಾ:ಕೆ.ಸುಧಾಕರ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಅದರ ಭಾಗವಲ್ಲ. ಹಾಗಾಗಿ ಈ ಏನೂ ಹೇಳುವುದಿಲ್ಲ ಎಂದು ನುಣುಚಿದರು.

ಬಿಜೆಪಿ ಮತ್ತೆ ಅಧಿಕಾರಕ್ಕೆ

ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಬಿ.ಜೆ.ಪಿ ಗೆ 95 ರಿಂದ 100 ಸ್ಥಾನಗಳು ದೊರಕಬಹುದು ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ ಎಲ್ಲಾ ಸಮೀಕ್ಷೆಗಳು ಒಂದೊಂದು ರೀತಿಯಲ್ಲಿ ಬರುತ್ತವೆ. ಅದಕ್ಕಿಂತ ಜನರ ನಾಡಿ ಮಿಡಿತ ನಮಗೆ ಗೊತ್ತಿದೆ. ನಾವೂ 30-35 ವರ್ಷ ಗಳ ಕಾಲ ರಾಜಕಾರಣದಲ್ಲಿದ್ದೇವೆ. ಈ ಬಾರಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು ತಿಳಿಸಿದಾಗ ಚರ್ಚೆ ಮಾಡಿ ನಿರ್ಧಾರಕ್ಕೆ ಬರಲಾಗುವುದು ಎಂದರು.

ಪಿ.ಎಫ್.ಐ ಬೆಳವಣಿಗೆಗಳ ಬಗ್ಗೆ ಎನ್.ಎ. ಐ ಹಾಗೂ ರಾಜ್ಯ ಪೊಲೀಸ್ ಕ್ರಮಕೈಗೊಂಡಿದೆ ಎಂದು ತಿಳಿಸಿದರು.

Join Whatsapp