ಬಸ್ – ಕಾರು ಅಪಘಾತ: ಮಹಿಳೆ ಸೇರಿ ಇಬ್ಬರಿಗೆ ಗಾಯ

Prasthutha|

ನೆಲ್ಯಾಡಿ: ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ.

- Advertisement -

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಈ ಅಪಘಾತ ಎಂಬಲ್ಲಿ ಸಂಭವಿಸಿದೆ.

ಹಾಸನದಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಕಾರಿಗೆ, ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ ಬಸ್ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಹಿಳೆ ಸೇರಿ ಇಬ್ಬರು ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -


ಈ ಬಗ್ಗೆ ನೆಲ್ಯಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp