ನವದೆಹಲಿ: ಸಿಬಿಐ ತನಿಖೆ ನಡೆಸುತ್ತಿರುವ ಕೋ-ಲೊಕೇಶನ್ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಬುಧವಾರ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (ಎನ್ ಎಸ್ ಇ) ಮಾಜಿ ಮುಖ್ಯಸ್ಥೆ ಚಿತ್ರಾ ರಾಮಕೃಷ್ಣ ಮತ್ತು ಗ್ರೂಪ್ ಆಪರೇಟಿಂಗ್ ಆಫೀಸರ್ ಆನಂದ್ ಸುಬ್ರಮಣಿಯನ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರು ಎನ್ ಎಸ್ ಇಯ ಇಬ್ಬರು ಮಾಜಿ ಅಧಿಕಾರಿಗಳಿಗೆ ಶಾಸನಬದ್ಧ ಜಾಮೀನು ನೀಡುತ್ತಿರುವುದಾಗಿ ಹೇಳಿದರು.
ಆದೇಶದ ವಿವರವಾದ ಪ್ರತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ದೇಶದ ಅತಿದೊಡ್ಡ ಷೇರು ವಿನಿಮಯ ಕೇಂದ್ರದಲ್ಲಿ ಅಕ್ರಮಗಳ ಬಗ್ಗೆ ಮೇ 2018 ರಲ್ಲಿ ಎಫ್ ಐಆರ್ ದಾಖಲಿಸಲಾಗಿತ್ತು. ಮಾರುಕಟ್ಟೆ ವಿನಿಮಯ ಕೇಂದ್ರಗಳ ಕಂಪ್ಯೂಟರ್ ಸರ್ವರ್ ಗಳಿಂದ ಸ್ಟಾಕ್ ಬ್ರೋಕರ್ ಗಳಿಗೆ ಮಾಹಿತಿಯನ್ನು ಅಸಮರ್ಪಕವಾಗಿ ಪ್ರಸಾರ ಮಾಡಿದ ಆರೋಪದ ಮೇಲೆ ಸಿಬಿಐ ತನಿಖೆ ನಡೆಸುತ್ತಿದೆ.
ಫೆಬ್ರವರಿ 24 ರಂದು ಸುಬ್ರಮಣಿಯನ್ ನನ್ನು ಸಿಬಿಐ ಬಂಧಿಸಿತ್ತು.