ನವದೆಹಲಿ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಮೇಲಿನ ಕೇಂದ್ರ ಸರ್ಕಾರ ಹೇರಿದ ನಿಷೇಧವು ಪ್ರಜಾಪ್ರಭುತ್ವ ವಿರೋಧಿ ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ವಿರುದ್ಧವಾಗಿದೆ. ಇದರ ವಿರುದ್ಧ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಹೇಳಿದೆ.
ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಒಂದು ದಶಕದಿಂದ ದೇಶಾದ್ಯಂತ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿಯುಳ್ಳ ಮತ್ತು ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಮನೋಭಾವದೊಂದಿಗೆ ಜವಾಬ್ದಾರಿಯುತ ಯುವಕರನ್ನು ನಿರ್ಮಿಸುವ ದೃಷ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಒಂದು ಮಟ್ಟಿಗೆ ಅದನ್ನು ಸಾಧಿಸುವಲ್ಲಿ ಯಶಸ್ವಿಯಾಗಿದ್ದೇವೆ. ಸಂಘಟನೆಯ ಭಾಗವಾಗಿದ್ದ ಅನೇಕ ವಿದ್ಯಾವಂತ ಯುವಕರು ಈಗ ಸಾಮಾಜಿಕ ಚಟುವಟಿಕೆಗಳ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದಾರೆ ಎಂದು ತಿಳಿಸಿದೆ.
CFI ಸಾಂವಿಧಾನಿಕ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಕಾಪಾಡಿಕೊಂಡಿದೆ ಮತ್ತು ನಮ್ಮ ಕಾನೂನಿಗೆ ವಿರುದ್ಧವಾದ ಚಟುವಟಿಕೆಗಳನ್ನು ಉತ್ತೇಜಿಸಿಲ್ಲ. ಆದ್ದರಿಂದ, ಕಾನೂನಿಗೆ ಅನುಸಾರವಾಗಿ, MHA ನಿಂದ ನಿಷೇಧದ ಆದೇಶವನ್ನು ಒಪ್ಪಿಕೊಳ್ಳುವ ಸಂಸ್ಥೆಯಾಗಿ ಮತ್ತು ತಕ್ಷಣವೇ ಜಾರಿಗೆ ಬರುವಂತೆ ಭಾರತದಲ್ಲಿ ಸಂಸ್ಥೆಯ ಎಲ್ಲಾ ಚಟುವಟಿಕೆಗಳನ್ನು ನಿಲ್ಲಿಸುತ್ತದೆ ಎಂದು ಪ್ರಕಟಿಸಿದೆ.
ಅದೇ ಸಮಯದಲ್ಲಿ PFI ಗೆ ಸಂಬಂಧಿಸಿದಂತೆ ಕ್ಯಾಂಪಸ್ ಫ್ರಂಟ್ ವಿರುದ್ಧದ ಎಲ್ಲಾ ಆರೋಪಗಳನ್ನು ಆಧಾರರಹಿತ ಮತ್ತು ಕಟ್ಟುಕಥೆ ಎಂದು ನಾವು ತಿರಸ್ಕರಿಸುತ್ತೇವೆ. ಸಂಬಂಧಪಟ್ಟವರು ಕಾನೂನು ತಜ್ಞರೊಂದಿಗೆ ಚರ್ಚಿಸಿದ ನಂತರ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ತಿಳಿಸಿದೆ.
ಈ ಹಿಂದೆ ಸಂಸ್ಥೆಯೊಂದಿಗೆ ಸಂಬಂಧ ಹೊಂದಿದ್ದ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಹೆಸರಿನಲ್ಲಿ ಯಾವುದೇ ಕಾರ್ಯಕ್ರಮ ಅಥವಾ ಚಟುವಟಿಕೆಯನ್ನು ನಡೆಸದಂತೆ ನಾವು ವಿನಂತಿಸುತ್ತೇವೆ. ಯಾವುದೇ ಕಾರ್ಯಕ್ರಮ ಅಥವಾ ಚಟುವಟಿಕೆ ಅಥವಾ ಸಾಮಾಜಿಕ ಮಾಧ್ಯಮ ಪೋಸ್ಟ್’ಗಳು ಮತ್ತು ಕಾಮೆಂಟ್ ಗಳಿಗೆ ಸಂಸ್ಥೆಯ ಹೆಸರು ಅಥವಾ ಬ್ಯಾನರ್ ಅನ್ನು ಬಳಸುವುದಕ್ಕೆ ನಾವು ಜವಾಬ್ದಾರರಾಗಿರುವುದಿಲ್ಲ ಎಂದು ಕ್ಯಾಂಪಸ್ ಫ್ರಂಟ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.