ಪಿಎಫ್ ಐ, ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಅಧ್ಯಕ್ಷರ ಸಹಿತ ಹಲವು ನಾಯಕರ ಟ್ವಿಟ್ಟರ್ ಖಾತೆ ಸ್ಥಗಿತ

Prasthutha|

ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ ಐ) ಅಧಿಕೃತ ಟ್ವಿಟರ್ ಖಾತೆ ಹಾಗೂ ಇತರ ಸಾಮಾಜಿಕ ಜಾಲತಾಣಗಳ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ.

- Advertisement -

ಯುಎಪಿಎ ಅಡಿಯಲ್ಲಿ ಪಿಎಫ್ ಐ ಮತ್ತು ಅದರ ಎಂಟು ಅಂಗಸಂಸ್ಥೆಗಳನ್ನು ನಿಷೇಧಿಸಿದ ನಂತರ, ಟ್ವಿಟರ್, ಯೂಟ್ಯೂಬ್ ಚಾನೆಲ್ ಗಳು, ಇನ್ಸ್ ಸ್ಟಾಗ್ರಾಮ್ ಮತ್ತು ಫೇಸ್ ಬುಕ್ ಖಾತೆಗಳು ಸೇರಿದಂತೆ ಸಂಘಟನೆಯ ಎಲ್ಲಾ ಸಾಮಾಜಿಕ ಮಾಧ್ಯಮ ಕುರುಹುಗಳನ್ನು ನಿರ್ಬಂಧಿಸಲು ಸರ್ಕಾರ ಆದೇಶಿಸಿದೆ.

ಅಲ್ಲದೆ ದಾಳಿಯ ಸಂದರ್ಭದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ಬಂಧಿಸಿದ್ದ ಪಿಎಫ್ ಐ ಅಧ್ಯಕ್ಷ ಓಎಂಎ ಸಲಾಂ, ಪ್ರಧಾನ ಕಾರ್ಯದರ್ಶಿ ಅನೀಸ್ ಅಹ್ಮದ್ ಮತ್ತು ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಅಧ್ಯಕ್ಷರ ಸಹಿತ ಹಲವು ನಾಯಕರ ಟ್ವಿಟ್ಟರ್ ಖಾತೆಗಳನ್ನು ಟ್ವಿಟರ್ ಇಂಡಿಯಾ ತೆಗೆದುಹಾಕಿದೆ.

Join Whatsapp