ಬೆಂಗಳೂರು: ಬೆಂಗಳೂರಿನ ಕ್ರಾಂತಿವೀರ ಸಂಗಳ್ಳಿ ರಾಯಣ್ಣ ನಿಲ್ದಾಣ, ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿ ರೈಲ್ವೆ ನಿಲ್ದಾಣಗಳ ಆಧುನೀಕರಣಕ್ಕೆ ಕೇಂದ್ರ ಸಂಪುಟ ಅನುಮತಿ ನೀಡಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.
ದೇಶದ 199 ರೈಲ್ವೆ ನಿಲ್ದಾಣಗಳನ್ನು ಆಧುನೀಕರಣಗೊಳಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಈಗಾಗಲೇ ಬೆಂಗಳೂರಿನ ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ಮೂಲಸೌಕರ್ಯಗಳನ್ನು ಕಲ್ಪಿಸಿದ್ದು, ಬೆಂಗಳೂರಿನ ದಂಡು, ಯಶವಂತಪುರ ನಿಲ್ದಾಣಗಳ ಆಧುನೀಕರಣಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.
ಈ ರೈಲ್ವೆ ನಿಲ್ದಾಣಗಳಲ್ಲಿ ಅತ್ಯಾಧುನಿಕ ಫುಡ್ ಕೋರ್ಟ್, ವಿಶ್ರಾಂತಿ ಕೊಠಡಿ, ಮಕ್ಕಳು ಆಡವಾಡಲು ಪ್ರತ್ಯೇಕ ಸ್ಥಳ ನಿಗದಿ, ಶೌಚಾಲಯ, ಶುದ್ಧ ಕುಡಿಯುವ ನೀರು ಮತ್ತು ನಿಲ್ದಾಣದಲ್ಲಿ ಮಕ್ಕಳ ಮತ್ತು ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.