ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್.ಎಸ್.ಎಸ್. ಅನ್ನು ನಿಷೇಧಿಸಬೇಕೆಂದು ಆಗ್ರಹಿಸುತ್ತಿರುವುದು ದುರ್ದೈವದ ಸಂಗತಿ. ಅವರು ಈ ಮಟ್ಟಕ್ಕೆ ಇಳಿಯಬಾರದಿತ್ತು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಿಎಫ್ಐ ನಿಷೇಧಿಸಿರುವ ಕುರಿತು ವಿರೋಧ ವ್ಯಕ್ತಪಡಿಸಿ, ಸಮರ್ಥನೆ ಮಾಡಿಕೊಳ್ಳಲು ಕಾಂಗ್ರೆಸ್’ನಲ್ಲಿ ಯಾವ ಆಧಾರಗಳೂ ಇಲ್ಲ. ಈ ಹಿಂದೆ ಸಿದ್ಧರಾಮಯ್ಯನವರೇ ಪಿಎಫ್ಐ ಸಂಘಟನೆ ಮೇಲಿದ್ದ ಪ್ರಕರಣಗಳನ್ನು ರದ್ದು ಮಾಡಿದ್ದರು. ಆರ್.ಎಸ್.ಎಸ್. ದೇಶಪ್ರೇಮಿಗಳ ಸಂಘಟನೆ. ಇಂತಹ ಸಂಘಟನೆಯನ್ನು ನಿಷೇಧಿಸಬೇಕೆನ್ನುವ ಆಗ್ರಹ ಸರಿಯಲ್ಲ ಎಂದು ತಿಳಿಸಿದ್ದಾರೆ.