ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ಹೊಸ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ. ವರಾಲೆ ಅವರನ್ನು ನೇಮಕ ಮಾಡಲಾಗಿದೆ.
ಸುಪ್ರೀಮ್ ಕೋರ್ಟ್ ನ ಸಿಜೆಐ ಯು.ಯು ಲಲಿತ್ ಅವರನ್ನೊಳಗೊಂಡ ಸಮಿತಿಯ ಪಿ.ಬಿ. ವರಾಲೆ ಅವರನ್ನು ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡಿ ಆದೇಶ ನೀಡಿದ್ದಾರೆ.
ಮಹಾರಾಷ್ಟ್ರ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ವರಾಲೆ ಅವರು 1985 ರಿಂದಲೇ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಂಬೆ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಆಗಿರುವ ಇವರು ಕಾನೂನು ಮಹಾವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು.
2008ರಲ್ಲಿ ಬಾಂಬೆ ಹೈಕೋರ್ಟ್ ನ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು ಇದೀಗ ಕರ್ನಾಟಕದ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಮುಂದುವರಿಯಲಿದ್ದಾರೆ.