ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ರಾಷ್ಟ್ರ ರಾಜಧಾನಿಯ ಪಕ್ಷದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ನಾನು (ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ) ನನ್ನ ನಾಮಪತ್ರವನ್ನು ಸಲ್ಲಿಸಲಿದ್ದೇನೆ” ಎಂದು ಪಕ್ಷದ ಕಚೇರಿಗೆ ತೆರಳುವಾಗ ಖರ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತು ಜಾರ್ಖಂಡ್ ನಾಯಕ ಕೆ.ಎನ್.ತ್ರಿಪಾಠಿ ಅವರು ಉನ್ನತ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು.