ಮುಂಬೈ: ಇಸ್ಲಾಮಿಕ್ ಸ್ಟೇಟ್ (ಐಎಸ್) ಭಯೋತ್ಪಾದಕ ಸಂಘಟನೆಗೆ ಸೇರಲು ಯುವಕರಿಗೆ ಪ್ರಚೋದನೆ ನೀಡಿದ ಆರೋಪದ ನಂತರ 2016 ರಿಂದ ಜೈಲಿನಲ್ಲಿದ್ದ ಆರ್ಶಿ ಖುರೇಷಿಯನ್ನು ವಿಶೇಷ ನ್ಯಾಯಾಲಯ ಶುಕ್ರವಾರ ದೋಷಮುಕ್ತಗೊಳಿಸಿದೆ.
52 ವರ್ಷ ಪ್ರಾಯದ ಖುರೇಷಿ ಅವರು ನ್ಯಾಯಾಲಯದ ಮುಂದೆ ಸಾಕ್ಷ್ಯಾಧಾರಗಳ ಪರಿಶೀಲನೆಯ ನಂತರ ಎಲ್ಲಾ ಆರೋಪಗಳಿಂದ ಮುಕ್ತರಾಗಿದ್ದಾರೆ ಎಂದು ವಿಶೇಷ ನ್ಯಾಯಾಧೀಶ ಎ ಎಂ ಪಾಟೀಲ್ ಅವರು ತೀರ್ಪು ನೀಡಿದರು.
ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯಡಿಯಲ್ಲಿ ಕುಮ್ಮಕ್ಕು ನೀಡುವುದು, ಕಾನೂನುಬಾಹಿರ ಚಟುವಟಿಕೆಗೆ ಪ್ರಚೋದನೆ ನೀಡುವುದು ಮತ್ತು ಭಯೋತ್ಪಾದಕ ಸಂಘಟನೆಗೆ ಬೆಂಬಲದ ಆರೋಪದಲ್ಲಿ ಅವರನ್ನು 2016ರಲ್ಲಿ ಬಂಧಿಸಿ ಜೈಲಿಗಟ್ಟಲಾಗಿತ್ತು. ಆರು ವರ್ಷಗಳ ದೀರ್ಘ ಕಾಲ ಜೈಲಿನಲ್ಲಿದ್ದು, ಇದೀಗ ನಿರಪರಾಧಿಯಾಗಿ ಬಿಡುಗಡೆಯಾಗಿದ್ದಾರೆ.
ಭಯೋತ್ಪಾದನೆ ಆರೋಪದಲ್ಲಿ 6 ವರ್ಷಗಳಿಂದ ಜೈಲಿನಲ್ಲಿದ್ದ ಖುರೇಷಿ ನಿರಪರಾಧಿಯಾಗಿ ಬಿಡುಗಡೆ
Prasthutha|