ನವದೆಹಲಿ: ಕೇಂದ್ರ ಸರಕಾರವು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಪಡಿಸಿ ಅದರ ಕೆಲಸ ಕಾರ್ಯಗಳನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದೊಂದಿಗೆ ವಿಲೀನಗೊಳಿಸಲು ಮುಂದಾಗಿದೆ.
ಮುಸ್ಲಿಮರು, ಕ್ರೈಸ್ತರು, ಬೌದ್ಧರು, ಸಿಖ್ಖರು, ಪಾರ್ಸಿ, ಜೈನ ಮುಂತಾದ ಅಲ್ಪಸಂಖ್ಯಾತ ಸಮುದಾಯಕ್ಕೆ ಸಂಬಂಧಿಸಿದ ವಿಷಯಗಳಿಗೆ ಗಮನಹರಿಸಲು, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಡಿ ಇದ್ದ ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆಗೆ ಪ್ರತ್ಯೇಕ ಸಚಿವಾಯವನ್ನು 2006ರಲ್ಲಿ ಕಾಂಗ್ರೇಸ್ ಸರಕಾರ ರಚನೆ ಮಾಡಿತ್ತು.
ಕಾಂಗ್ರೆಸ್ ಆಡಳಿತದಲ್ಲಿ ತಂದಿರುವ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿ ಬದಲಿಸುವುದು ಮೋದಿ ಸರಕಾರದ ಗುರಿ, ತುಷ್ಟೀಕರಣ ನೀತಿಯನ್ನು ಸರಕಾರ ಅಳವಡಿಸಿಕೊಳ್ಳುವುದಿಲ್ಲ ಎಂದು ಸರಕಾರ ಈ ಬಗ್ಗೆ ಸ್ಪಷ್ಟನೆ ನೀಡಿದೆ ಎಂದು ತಿಳಿದುಬಂದಿದೆ.
ಮೋದಿ ಸರಕಾರ ಬಂದಾಗಿನಿಂದಲೂ ಅಲ್ಪಸಂಖ್ಯಾತ ವ್ಯವಹಾರಗಳ ಸ್ವತಂತ್ರ ಸಚಿವಾಲಯದ ಅಗತ್ಯವಿಲ್ಲ ಎಂದೇ ಪ್ರತಿಪಾದಿಸಲಾಗಿತ್ತು. ಆ ಸಚಿವಾಲಯವನ್ನು ಅಲ್ಪ ಸಂಖ್ಯಾತ ವ್ಯವಹಾರಗಳ ಇಲಾಖೆಯನ್ನಾಗಿಸಿ, ಅದನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಡಿಯಲ್ಲಿ ತರಲು ಬಯಸಿದೆ.