ಭಾರತೀಯ ವಾಯುಪಡೆಗೆ ದೇಶೀಯ ಲಘು ಯುದ್ಧ ಹೆಲಿಕಾಪ್ಟರ್ ‘ಪ್ರಚಂಡ್’ ಸೇರ್ಪಡೆ

Prasthutha|

ಜೋಧಪುರ: ದೇಶೀಯವಾಗಿ ಅಭಿವೃದ್ಧಿಪಡಿಸಿದ ಲಘು ಯುದ್ಧ ಹೆಲಿಕಾಪ್ಟರ್ (ಎಲ್ ಸಿಎಚ್)ನ ಮೊದಲ ಬ್ಯಾಚ್ ‘ಪ್ರಚಂಡ್’ ಅನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಸೋಮವಾರ ಭಾರತೀಯ ವಾಯುಪಡೆಗೆ ಸೇರ್ಪಡೆಗೊಳಿಸಲಾಯಿತು.

- Advertisement -

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾರತೀಯ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಮತ್ತು ಇತರ ಹಿರಿಯ ಮಿಲಿಟರಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜೋಧ್ಪುರ ಏರ್ ಫೋರ್ಸ್ ಸ್ಟೇಷನ್ ನಲ್ಲಿ ನಡೆದ ಸಮಾರಂಭದಲ್ಲಿ ನಾಲ್ಕು ಹೆಲಿಕಾಪ್ಟರ್ ಗಳನ್ನು ಐಎಎಫ್ ಗೆ ಸೇರ್ಪಡೆಗೊಳಿಸಲಾಯಿತು.

ಎಲ್ ಸಿಎಚ್ ಸರಕಾರಿ ಸ್ವಾಮ್ಯದ  ಪ್ರಮುಖ ಏರೋಸ್ಪೇಸ್ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಿಂದ ಅಭಿವೃದ್ಧಿಪಡಿಸಲಾಗಿದೆ. ಇದನ್ನು ಪ್ರಾಥಮಿಕವಾಗಿ ಎತ್ತರದ ಪ್ರದೇಶಗಳಲ್ಲಿ ನಿಯೋಜಿಸಲು ವಿನ್ಯಾಸಗೊಳಿಸಲಾಗಿದೆ.

- Advertisement -

1999ರಲ್ಲಿ ಕಾರ್ಗಿಲ್ ಯುದ್ಧದ ಸಮಯದಲ್ಲಿ ಅದರ ಅಗತ್ಯವನ್ನು ಮನಗಂಡ ನಂತರ ಮೂಲಭೂತವಾಗಿ ಪರ್ವತ ಯುದ್ಧಕ್ಕಾಗಿ ಅಭಿವೃದ್ಧಿಪಡಿಸಲಾದ ಸ್ಥಳೀಯವಾಗಿ ನಿರ್ಮಿಸಲಾದ ಲಘು ಯುದ್ಧ ಹೆಲಿಕಾಪ್ಟರ್ (LCH) ಇದಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಿಂಗ್, ಇದು ರಕ್ಷಣಾ ಉತ್ಪಾದನೆಯಲ್ಲಿ ಭಾರತದ ಸಾಮರ್ಥ್ಯವನ್ನು ಪ್ರತಿಬಿಂಬಿಸುವ ಮಹತ್ವದ ಸಂದರ್ಭವಾಗಿದೆ  ಎಂದು ಹೇಳಿದ್ದಾರೆ.



Join Whatsapp