SDPI ಯನ್ನು ನಿಷೇಧಿಸಲು ಪೂರಕವಾದ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ: ಚುನಾವಣಾ ಆಯೋಗ

Prasthutha|

ನವದೆಹಲಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ಮತ್ತು ಇತ್ತೀಚೆಗೆ ಕೇಂದ್ರ ಸರ್ಕಾರದಿಂದ ನಿಷೇಧಕ್ಕೊಳಗಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ ಐ) ನಡುವೆ ಯಾವುದೇ ಸಂಬಂಧ ಇರುವುದು ಪತ್ತೆಯಾಗಿಲ್ಲ. ಎಸ್ ಡಿಪಿಐಯನ್ನು ನಿಷೇಧಿಸಲು ಬೇಕಾದ ಯಾವುದೇ ಸಾಕ್ಷ್ಯಗಳು ಲಭಿಸಿಲ್ಲ ಎಂದು ಚುನಾವಣಾ ಆಯೋಗ ಹೇಳಿರುವುದಾಗಿ ‘ಇಂಡಿಯಾ ಟುಡೇ’ ವರದಿ ಮಾಡಿದೆ.

- Advertisement -


ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಇಂಡಿಯಾ ಟುಡೇಗೆ ನೀಡಿದ ಹೇಳಿಕೆಯಲ್ಲಿ, ಎಸ್ ಡಿಪಿಐ ಎಲ್ಲಾ ಅಗತ್ಯ ದಾಖಲೆಗಳನ್ನು ಸಲ್ಲಿಸಿದೆ. ಇದುವರೆಗೆ ಪಿಎಫ್ ಐ ಮತ್ತು ಎಸ್ ಡಿಪಿಐ ನಡುವೆ ಯಾವುದೇ ಸಂಪರ್ಕವನ್ನು ಹೊಂದಿರುವುದು ಪತ್ತೆಯಾಗಿಲ್ಲ ಮತ್ತು ಅದು ರಾಜಕೀಯ ಪಕ್ಷವಾಗಿ ಎಲ್ಲಾ ದಾಖಲೆಗಳನ್ನು ಆಯೋಗಕ್ಕೆ ಸಲ್ಲಿಸಿದೆ. ಅದನ್ನು ನಿಷೇಧಿಸುವಂತಹ ಸಾಕ್ಷ್ಯಗಳು ನಮ್ಮಲ್ಲಿ ಇಲ್ಲ ಎಂದು ತಿಳಿಸಿದರು.


“ಪಿಎಫ್ ಐ ವಿರುದ್ಧ ಕೇಂದ್ರ ಸರ್ಕಾರ ಕೈಗೊಂಡ ಕ್ರಮದ ಬಗ್ಗೆ ನಮಗೆ ಮಾಹಿತಿ ಇದೆ. ಎಸ್ ಡಿಪಿಐ ಎಲ್ಲಾ ಅಗತ್ಯ ದಾಖಲೆಗಳನ್ನು ಸಲ್ಲಿಸಿದೆ. ಇಲ್ಲಿಯವರೆಗೆ ಪಿಎಫ್ ಐ ಮತ್ತು ಎಸ್ ಡಿಪಿಐ ನಡುವೆ ಯಾವುದೇ ಸಂಪರ್ಕ ಇರುವುದು ಪತ್ತೆಯಾಗಿಲ್ಲ.  ಅವರ ಕಡೆಯಿಂದ ಯಾವುದೇ ತಪ್ಪು ನಡೆದಿಲ್ಲ ಎಂದು ಸಿಇಸಿ ರಾಜೀವ್ ಕುಮಾರ್ ಹೇಳಿದರು ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ.

- Advertisement -


2009ರ ಜೂನ್ 21ರಂದು ಎಸ್ ಡಿಪಿಐ ಪಕ್ಷವನ್ನು ಸ್ಥಾಪಿಸಲಾಗಿದೆ. ಇದನ್ನು ಏಪ್ರಿಲ್ 13, 2010 ರಂದು ಭಾರತೀಯ ಚುನಾವಣಾ ಆಯೋಗದಲ್ಲಿ ನೋಂದಣಿ ಮಾಡಲಾಗಿದೆ. ಇಲ್ಲಿಯವರೆಗೆ, ಎಸ್ ಡಿಪಿಐ ಕೇರಳ, ತಮಿಳುನಾಡು, ರಾಜಸ್ಥಾನ, ಬಿಹಾರ, ಮಧ್ಯಪ್ರದೇಶ, ಕರ್ನಾಟಕ, ಪಶ್ಚಿಮ ಬಂಗಾಳ ಮತ್ತು ಆಂಧ್ರಪ್ರದೇಶದ ಮುನ್ಸಿಪಲ್ ಕಾರ್ಪೊರೇಷನ್ ಗಳು ಮತ್ತು ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದು, ನೂರಾರು ಜನಪ್ರತಿನಿಧಿಗಳನ್ನು ಹೊಂದಿದೆ.



Join Whatsapp