ಶಿವಮೊಗ್ಗ: ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಘಟನೆ ಶಿಕಾರಿಪುರದಲ್ಲಿ ನಡೆದಿದೆ.
ತಟ್ಟೇಹಳ್ಳಿ ಗ್ರಾಮದ ರಾಕೇಶ್ ನಾಯ್ಕ (24) ಬಂಧಿತ ಆರೋಪಿ. ತಾಲೂಕಿನ ಮಾರ್ಕಾಂಡಯ್ಯ ಅರಣ್ಯ ಪ್ರದೇಶದಲ್ಲಿ ಜಿಂಕೆಗಳನ್ನು ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಬಂಧಿಸಲಾಗಿದೆ.
ಉಳಿದ ಮೂರು ಆರೋಪಿಗಳು ಪರಾರಿಯಾಗಿದ್ದು, ಬಂಧಿತ ರೋಪಿಯಿಂದ ಸಿಂಗಲ್ ಬ್ಯಾರಲ್ ಗನ್, 2 ಕೆ.ಜಿ. ಜಿಂಕೆ ಮಾಂಸ, ತಕ್ಕಡಿ ಹಾಗೂ ಮಾಂಸ ಕತ್ತರಿಸಲು ಉಪಯೋಗಿಸುತ್ತಿದ್ದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅರಣ್ಯ ಸಹಾಯಕ ಸಂರಕ್ಷಣಾಧಿಕಾರಿ ಜಿ. ಗೋಪ್ಯಾನಾಯ್ಕ್ ಮಾರ್ಗದರ್ಶನದಲ್ಲಿ, ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಉಪವಲಯ ಅರಣ್ಯಾಧಿಕಾರಿ ಹರೀಶ್, ಆಂಜನೇಯ, ಅರಣ್ಯ ರಕ್ಷಕ ಮುತ್ತಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.