ಜಮ್ಮು – ಕಾಶ್ಮೀರ ಕಾರಾಗೃಹ ಡಿಜಿಪಿ ಹತ್ಯೆ: ಆರೋಪಿ ಬಂಧನ

Prasthutha|

ಜಮ್ಮು: ಜಮ್ಮು ಮತ್ತು ಕಾಶ್ಮೀರ ಕಾರಾಗೃಹ ಇಲಾಖೆಯ ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಹತ್ಯೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -


ಅವರ ಮನೆಯ ಸಹಾಯಕ ಯಾಸೀರ್ ಅಹಮ್ಮದ್ ಲೋಹಿಯಾ ಅವರ ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ಮಾಡಲಾಗುತ್ತಿದೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ತಿಳಿಸಿದ್ದಾರೆ.


1992ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ 57 ವರ್ಷದ ಲೋಹಿಯಾ ಅವರು ಜಮ್ಮು ಮತ್ತು ಕಾಶ್ಮೀರದ ಕಾರಾಗೃಹ ವಿಭಾಗದ ಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸೋಮವಾರ (ಅ.3) ಅವರ ಮೃತದೇಹ ಕತ್ತು ಸೀಳಿದ ಮತ್ತು ಸುಟ್ಟು ಗಾಯಗಳ ಸ್ಥಿತಿಯಲ್ಲಿ ಜಮ್ಮುವಿನ ಹೊರವಲಯದಲ್ಲಿರುವ ಅವರ ನಿವಾಸದಲ್ಲಿ ಪತ್ತೆಯಾಗಿತ್ತು.




Join Whatsapp