ರಾಂಚಿ: ಮುಸ್ಲಿಮ್ ಯುವಕನನ್ನು ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿ , ಥಳಿಸಿ ಕೊಂದಿರುವ ಘಟನೆ ಜಾರ್ಖಂಡ್ ನ ಗುಮ್ಲಾ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸ್ ಠಾಣೆ ವ್ಯಾಪ್ತಿಯ ಗೋವಿಂದಪುರ ಪಂಚಾಯತ್ನ ತಿಗ್ರಾ ಗ್ರಾಮದ ನಿವಾಸಿ ಇಜಾಜ್ ಅನ್ಸಾರಿ (22) ಎಂಬಾತನನ್ನು ದುಷ್ಕರ್ಮಿಗಳ ಗುಂಪೊಂದು ಥಳಿಸಿ ಕೊಂದಿದ್ದಾರೆ.
ಸುಮಾರು 30-35 ಜನರ ಗುಂಪು ಇಜಾಜ್ ನನ್ನು ದೊಣ್ಣೆ, ಕೊಡಲಿಯಿಂದ ಹೊಡೆದು ಕೊಂದಿದ್ದಾರೆ ಎಂದು ವರದಿಯಾಗಿದ್ದು, ಹಂತಕರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಇತ್ತೀಚಿಗೆ ಜಾರ್ಖಂಡ್ ನಲ್ಲಿ ಮುಸ್ಲಿಮರ ಮೇಲೆ ಅನೇಕ ಗುಂಪು ಹತ್ಯೆಗಳು ನಡೆಯುತ್ತಿರುವುದು ಕೇಳಿಬರುತ್ತಿದೆ.