ಸುಳ್ಯ | ಸ್ಕೂಟಿ-ಕಾರು ಪರಸ್ಪರ ಡಿಕ್ಕಿ: ಅಣ್ಣ – ತಂಗಿ ಮೃತ್ಯು

Prasthutha|

- Advertisement -

ಸುಳ್ಯ: ಸ್ಕೂಟಿ ಮತ್ತು ಕಾರು ಪರಸ್ಪರ ಡಿಕ್ಕಿಯಾಗಿ ದ್ವಿಚಕ್ರದಲ್ಲಿದ್ದ ಅಣ್ಣ ಮತ್ತು ತಂಗಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಸುಳ್ಯ ತಾಲೂಕಿನ ಎಲಿಮಲೆ ಸಮೀಪದ ಸುಬ್ರಹ್ಮಣ್ಯ – ಜಾಲ್ಸೂರು ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.

ನಿಶಾಂತ್ ಹಾಗೂ ಸಹೋದರಿ ಮೋಕ್ಷಾ ಮೃತಪಟ್ಟವರು ಎಂದು ಗುರುತಿಸಲಾಗಿದೆ.

- Advertisement -

ನಿಶಾಂತ್ ಚಲಾಯಿಸುತ್ತಿದ್ದ ಸ್ಕೂಟಿ ಮತ್ತು ಮಾರುತಿ ಕಾರು ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಿಶಾಂತ್ ಹಾಗೂ ಮೋಕ್ಷಾ ಅವರನ್ನು ಸ್ಥಳೀಯರು ತಕ್ಷಣವೇ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಮಾರ್ಗ ಮಧ್ಯೆ ನಿಶಾಂತ್ ಸಾವನ್ನಪ್ಪಿದ್ದರೆ, ಆತನ ತಂಗಿ ಮೋಕ್ಷಾಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಳು ಎಂದು ತಿಳಿದು ಬಂದಿದೆ.




Join Whatsapp