ಬಿಜೆಪಿ , ಕಾಂಗ್ರೆಸ್‌ ಮುಕ್ತ ರಾಜಕೀಯಕ್ಕಾಗಿ‘ಭಾರತ್ ರಾಷ್ಟ್ರ ಸಮಿತಿ’ ಪಕ್ಷದೊಂದಿಗೆ ಜೆಡಿಎಸ್ ಮೈತ್ರಿ : ಹೆಚ್‌ ಡಿ ಕುಮಾರಸ್ವಾಮಿ

Prasthutha|

ಬೆಂಗಳೂರು: ಬಿಜೆಪಿ ಮತ್ತು ಕಾಂಗ್ರೆಸ್‌ ಮುಕ್ತ ರಾಜಕೀಯ ಸ್ಥಿತಿ ನಿರ್ಮಾಣಕ್ಕೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್) ಪಕ್ಷವನ್ನು ‘ಭಾರತ್ ರಾಷ್ಟ್ರ ಸಮಿತಿ’ ಎಂಬ ಹೆಸರಿನಡಿಯಲ್ಲಿ ರಾಷ್ಟ್ರೀಯ ಪಕ್ಷವನ್ನಾಗಿ ಘೋಷಿಸಿ , ಅವರೊಂದಿಗೆ ಜೆಡಿಎಸ್‌ ಪಕ್ಷ ಕೈ ಜೋಡಿಸಲಾಗುವುದು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

- Advertisement -

ತಮ್ಮ ಪಕ್ಷದ ಎಲ್ಲ ಶಾಸಕರೊಂದಿಗೆ ಹೈದರಾಬಾದ್ಗೆ ತೆರಳಿದ್ದ ಅವರು, ಬಿಆರ್‌ ಎಸ್ ಜತೆ ಕೈಜೋಡಿಸಿ ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳನ್ನು ಎದುರಿಸಲಿದ್ದೇವೆ ಎಂದು ಮಾಧ್ಯಮ ಹೇಳಿಕೆ ನೀಡಿದ್ದಾರೆ.

 ‘ಜೆಡಿಎಸ್ ಮತ್ತು ಬಿಆರ್ ಎಸ್ ಮಿತ್ರಪಕ್ಷಗಳಾಗಿ ಕೆಲಸ ಮಾಡಲಿವೆ. ಬಿಆರ್ ಎಸ್ ರಾಷ್ಟ್ರೀಯ ಪಕ್ಷವಾಗಿ ಹೊರ ಹೊಮ್ಮಿರುವುದನ್ನು ಸ್ವಾಗತಿಸುತ್ತೇವೆ ಎಂದಿದ್ದಾರೆ.



Join Whatsapp