ಮುಖೇಶ್ ಅಂಬಾನಿ ಕುಟುಂಬಕ್ಕೆ ಬೆದರಿಕೆ: ಒಬ್ಬನ ಬಂಧನ

Prasthutha|

ಪಾಟ್ನಾ: ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬವನ್ನು ಗುರಿಯಾಗಿಸಿಕೊಂಡು ಬೆದರಿಕೆ ಕರೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಬಿಹಾರದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

ಪೊಲೀಸ್ ತಂಡವು ಮಧ್ಯರಾತ್ರಿ ದರ್ಬಂಗಾ ಜಿಲ್ಲೆಯಿಂದ ಶಂಕಿತನೊಬ್ಬನನ್ನು ಬಂಧಿಸಿ ಮುಂಬೈಗೆ ಕರೆತರುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇಲ್ಲಿನ ಸರ್ ಹೆಚ್ ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಎರಡು ಫೋನ್ ಕರೆಗಳು ಬಂದಿದ್ದು, ದಕ್ಷಿಣ ಮುಂಬೈನಲ್ಲಿರುವ ಅಂಬಾನಿ ನಿವಾಸ ‘ಆಂಟಿಲಿಯಾ’ ಜೊತೆಗೆ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಅಪರಿಚಿತ ಕರೆ ಮಾಡಿದವರು ಬೆದರಿಕೆ ಹಾಕಿದ್ದರು.



Join Whatsapp