ಭಾರತ್ ಜೋಡೋ ಯಾತ್ರೆ: ಸ್ವಾಗತ ಕೋರುವ ಬ್ಯಾನರ್ ನಲ್ಲಿ ಸಾವರ್ಕರ್ ಭಾವಚಿತ್ರ

Prasthutha|


ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಐದನೇ ದಿನಕ್ಕೆ ಕಾಲಿಟ್ಟಿದ್ದು, ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್ ನಲ್ಲಿ ಬ್ರಿಟಿಷರೊಂದಿಗೆ ಕ್ಷಮೆ ಕೋರಿದ ವಿ.ಡಿ.ಸಾವರ್ಕರ್ ಫೋಟೋ ಇರುವ ಫ್ಲೆಕ್ಸ್ ಅಳವಡಿಸಲಾಗಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.
ನಾಗಮಂಗಲ ತಾಲೂಕಿನ ಚೀಣ್ಯ ಗ್ರಾಮದಲ್ಲಿ ವಿ.ಡಿ. ಸಾವರ್ಕರ್ ಇರುವ ಫ್ಲೆಕ್ಸ್ ಒಂದನ್ನು ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರ ಫೋಟೋ ಸಹಿತ ಹಾಕಲಾಗಿದೆ.

- Advertisement -


ಈ ಹಿಂದೆ ಕೇರಳದಲ್ಲೂ ಯಾತ್ರೆಯ ಪ್ರಚಾರಕ್ಕಾಗಿ ಹಾಕಲಾಗಿದ್ದ ಬ್ಯಾನರ್ ನಲ್ಲಿ ಸಾವರ್ಕರ್ ಚಿತ್ರ ಕಾಣಿಸಿಕೊಂಡಿತ್ತು. ಬಳಿಕ ಪಕ್ಷದ ಕಾರ್ಯಕರ್ತರು ಆ ಚಿತ್ರಕ್ಕೆ ಮಹಾತ್ಮ ಗಾಂಧಿಯ ಚಿತ್ರವನ್ನು ಅಂಟಿಸಿದ್ದರು.


ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ವಿರೋಧಿಯಾದ ಸಾವರ್ಕರ್ ಫೋಟೋ ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿರುವುದು ಕೆಲವು ಕಾರ್ಯಕರ್ತರ ಆಕ್ರೋಶಕ್ಕೂ ಕಾರಣವಾಗಿದೆ.

- Advertisement -


ಈ ಬಗ್ಗೆ ಕಾಂಗ್ರೆಸ್ ಮುಖಂಡರೊಬ್ಬರು ಸ್ಪಷ್ಟನೆ ನೀಡಿದ್ದು, ಕಾಂಗ್ರೆಸ್ ಕಾರ್ಯಕರ್ತರು ಫ್ಲೆಕ್ಸ್ ಅನ್ನು ಅಲ್ಲಿಂದ ತೆರವುಗೊಳಿಸಿದ್ದಾರೆ. ಇದರಲ್ಲಿ ಬಿಜೆಪಿ, ಸಂಘಪರಿವಾರದ ಕಾರ್ಯಕರ್ತರ ಕೈವಾಡ ಇದೆ ಎಂದು ಹೇಳಿದ್ದಾರೆ.



Join Whatsapp