ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ ಕಾರ್ಯಕರ್ತರು

Prasthutha|

ಶಹಾಪುರ: ಬಿಜೆಪಿ ಸರ್ಕಾರಗಳ ಆಡಳಿತ ವೈಫಲ್ಯ ಹಾಗೂ ದುರಾಡಳಿತಕ್ಕೆ ಬೇಸತ್ತು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

- Advertisement -

ತಾಲೂಕಿನ ವನದುರ್ಗಾ ಗ್ರಾಮದ 20ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್‌ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಶಾಸಕ ಶರಣಬಸಪ್ಪ ಗೌಡ, ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಸುಳ್ಳಿನ ಮೂಲಕ ಜನರಲ್ಲಿ ಭ್ರಮೆಯನ್ನು ಸೃಷ್ಟಿಸಿ, ಜನರಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಮೂಲಕ ಜನರ ಭಾವನೆ ಮೇಲೆ ಸವಾರಿ ಮಾಡುತ್ತಾ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರು ತತ್ತರಿಸಿ ಹೋಗುವಂತೆ ಮಾಡಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.



Join Whatsapp