ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ

Prasthutha|

ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಹಿರಿಯ ಎಸ್ ಪಿ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಇನ್ನೂ ಜೀವರಕ್ಷಕ ವ್ಯವಸ್ಥೆಯಲ್ಲಿದ್ದಾರೆ ಎಂದು ಗುರುಗ್ರಾಮ್’ನ ಮೇದಾಂತ ಆಸ್ಪತ್ರೆ ಮೂಲಗಳು ತಿಳಿಸಿವೆ.

- Advertisement -

ಸಮಾಜವಾದಿ ಪಕ್ಷದ ಸಂಸ್ಥಾಪಕರಿಗೆ ವಿಶೇಷ ತಜ್ಞರ ತಂಡದಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಪ್ರಕಟನೆ ತಿಳಿಸಿದೆ.

ಕಳೆದ ತಿಂಗಳು ದೆಹಲಿ ಆಸ್ಪತ್ರೆಗೆ ದಾಖಲಾಗಿದ್ದ ಮುಲಾಯಂ ಸಿಂಗ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಬಳಿಕ ಅವರನ್ನು ಅಕ್ಟೋಬರ್ 2ರಂದು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಮುಲಾಯಂ ಅವರ ಪತ್ನಿ ಸಾಧನಾ ಗುಪ್ತಾ ಜುಲೈನಲ್ಲಿ ನಿಧನರಾಗಿದ್ದರು.

- Advertisement -

ಮುಲಾಯಂ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸತದ ಮೂರು ಬಾರಿ ಸೇವೆ ಸಲ್ಲಿಸಿದ್ದರು ಮತ್ತು ಭಾರತ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

ದೀರ್ಘಕಾಲ ಸಂಸದರಾಗಿದ್ದ ಅವರು ಹಾಲಿ ಸಂಸದರೂ ಆಗಿರುವ ಅವರು ಮೈನ್’ಪುರಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಹಿಂದೆ ಆಝಂಗಢ ಮತ್ತು ಸಂಭಾಲ್ ಕ್ಷೇತ್ರಗಳಿಂದ ಸಂಸದರಾಗಿ ಆಯ್ಕೆಯಾಗಿದ್ದರು.



Join Whatsapp