ನವದೆಹಲಿ: ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮುಂಭಾಗಕ್ಕೆ ಹಾನಿಯಾಗಲು ಕಾರಣವಾದ ಎಮ್ಮೆಗಳ ಮಾಲೀಕರ ವಿರುದ್ಧ ಗುಜರಾತ್ ನ ರೈಲ್ವೆ ರಕ್ಷಣಾ ಪಡೆ (ಆರ್ ಪಿಎಫ್) ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಜರಾತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಸೆಮಿ ಹೈಸ್ಪೀಡ್ ‘ವಂದೇ ಭಾರತ್’ ರೈಲು ಎಮ್ಮೆಗಳಿಗೆ ಢಿಕ್ಕಿ ಹೊಡೆದ ಪರಿಣಾಮ ರೈಲಿನ ಮುಂಭಾಗಕ್ಕೆ ಹಾನಿಯಾಗಿತ್ತು.
ಹೊಸದಾಗಿ ಪ್ರಾರಂಭಿಸಲಾದ ಮುಂಬೈ ಸೆಂಟ್ರಲ್-ಗಾಂಧಿನಗರ ವಂದೇ ಭಾರತ್ ರೈಲು ಗುರುವಾರ ಬೆಳಿಗ್ಗೆ 11.15 ರ ಸುಮಾರಿಗೆ ಅಹಮದಾಬಾದ್ ಬಳಿ ಎಮ್ಮೆಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ಕು ಎಮ್ಮೆಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.