ದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿರುವ ಉದಯ್ ಉಮೇಶ್ ಲಲಿತ್ ನವೆಂಬರ್ 8 ರಂದು ನಿವೃತ್ತಿಯಾಗಲಿರುವ ಹಿನ್ನೆಲೆಯಲ್ಲಿ ಮುಂದಿನ ಮುಖ್ಯ ನ್ಯಾಯಮೂರ್ತೀಯ ನಾಮ ನಿರ್ದೇಶನ ಮಾಡುವಂತೆ ಕೇಂದ್ರ ಸರಕಾರ ಸೂಚಿಸಿದೆ.
ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯನ್ನು ಹೆಸರಿಸುವಂತೆ ಕೇಂದ್ರ ಕಾನೂನು ಸಚಿವಾಲಯವು ಸಿಜೆಐ ಯುಯು ಲಲಿತ್ ಅವರಿಗೆ ಪತ್ರ ಬರೆದಿದೆ.
ಬಲ್ಲ ಮೂಲಗಳ ಪ್ರಕಾರ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಭಾರತದ 50ನೇ ಮುಖ್ಯನ್ಯಾಯಮೂರ್ತಿಯಾಗಿ ನೇಮಕವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಅತ್ಯಂತ ಹಿರಿಯ ಮತ್ತು ಪ್ರಭಾವಿ ನ್ಯಾಯಾಧೀಶರಾಗಿದ್ದಾರೆ.
ಆಗಸ್ಟ್ 27ರಂದು ಮುಖ್ಯ ನ್ಯಾಯಮೂರ್ತಿಯಾಗಿ ಉದಯ್ ಉಮೇಶ್ ಲಲಿತ್ ಪ್ರಮಾಣ ವಚನ ಸ್ವೀಕರಿಸಿದ್ದರು.