ಪೋಷಕರನ್ನು ನಿಂದಿಸುವುದು ಓಕೆ, ಆದರೆ ಮೋದಿ, ಶಾ ವಿರುದ್ಧ ಸಲ್ಲ: ಚಂದ್ರಕಾಂತ್ ಪಾಟೀಲ್ ವಿವಾದಾತ್ಮಕ ಹೇಳಿಕೆ

Prasthutha|

ಮುಂಬೈ: ಪೋಷಕರನ್ನು ನಿಂದಿಸುವುದು ಸ್ವೀಕಾರಾರ್ಹ, ಆದರೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಒಂದು ಮಾತನ್ನೂ ಸಹಿಸುವುದಿಲ್ಲ ಎಂದು ಮಹಾರಾಷ್ಟ್ರ ಬಿಜೆಪಿ ಘಟಕದ ಮಾಜಿ ಮುಖ್ಯಸ್ಥ ಮತ್ತು ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಚಂದ್ರಕಾಂತ್ ಪಾಟೀಲ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -

ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪೋಷಕರನ್ನು ನಿಂದಿಸುವುದು ಸ್ವೀಕಾರಾರ್ಹ, ಇದು ಕೊಲ್ಲಾಪುರದಲ್ಲಿ ಸಾಮಾನ್ಯವಾಗಿದೆ. ಆದರೆ ಅವರು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಒಂದೇ ಒಂದು ನಿಂದನಾತ್ಮಕ ಪದವನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ವಿರೋಧ ಪಕ್ಷಗಳು ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದವು.

- Advertisement -

ಅವರು ತಮ್ಮ ನಾಯಕರನ್ನು ಹೊಗಳಬಹುದು, ಆದರೆ ಅವರು ಕೊಲ್ಹಾಪುರ ಮತ್ತು ಮಹಾರಾಷ್ಟ್ರದ ಸಂಸ್ಕೃತಿಗೆ ಹಾನಿ ಮಾಡಬಾರದು. ನಾಯಕರು ತಮ್ಮ ನಾಯಕರನ್ನು ಹೊಗಳುವಾಗ ಜಾಗರೂಕರಾಗಿರಬೇಕು. ಪೋಷಕರನ್ನು ನಿಂದಿಸುವುದು ಸ್ವೀಕಾರಾರ್ಹವಲ್ಲ ಎಂದು ಎನ್ ಸಿಪಿ ಶಾಸಕ ರೋಹಿತ್ ಪವಾರ್ ಹೇಳಿದ್ದಾರೆ.

ಶಿವಸೇನೆಯ ನಾಯಕಿ ಮನೀಷಾ ಕಯಾಂಡೆ ಅವರು ಚಂದ್ರಕಾಂತ್ ಪಾಟೀಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ, ಈ ಜನರು ಅಧಿಕಾರ ಪಡೆಯಲು ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ ಎಂದು ಆರೋಪಿಸಿದ್ದಾರೆ.



Join Whatsapp