ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆಯಾದ ಎಂ.ಆರ್. ಸೀತಾರಾಂ: ಯಾತ್ರೆಯ ಸಕಾರಾತ್ಮಕ ಪರಿಣಾಮಗಳ ಕುರಿತು ಚರ್ಚೆ

Prasthutha|

ಬೆಂಗಳೂರು: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರೊಂದಿಗೆ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಎಂ.ಆರ್.ಸೀತಾರಾಂ ಇಂದು ಜೊತೆಯಾದರು.

- Advertisement -

ತುಮಕೂರು ಜಿಲ್ಲೆಯ ಮಾಯಸಂದ್ರದಿಂದ ಬಾನಸಂದ್ರ ವರೆಗೆ ಮೂರು ಗಂಟೆಗಳ ಕಾಲ 12 ಕಿಲೋಮೀಟರ್ ದೂರ ಸಾಗಿದರು.

ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಪಾದಯಾತ್ರೆ ಯಶಸ್ವಿಯಾಗುತ್ತಿರುವ ಬಗ್ಗೆ  ಎಂ.ಆರ್. ಸೀತಾರಾಂ ಸಂತಸ ಹಂಚಿಕೊಂಡರು. ಪಕ್ಷ ಸಂಘಟನೆ ಕುರಿತಂತೆಯೂ ಚರ್ಚಿಸಿದರು.

- Advertisement -

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಎಂ.ಆರ್.ಸೀತಾರಾಂ, ರಾಹುಲ್ ಗಾಂಧಿಯವರ ಪಾದಯಾತ್ರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಈ ಯಾತ್ರೆ ಹೊಸ ದಿಕ್ಕು ತೋರಲಿದೆ ಎಂದರು.

ಭಾರತ್ ಜೋಡೋ ಯಾತ್ರೆಯಲ್ಲಿ ಎಂ.ಆರ್. ಸೀತಾರಾಂ ಅವರು ತುಮಕೂರು ಜಿಲ್ಲೆಯ ತುರುವೇಕೆರೆ, ಚಿಕ್ಕನಾಯಕನಹಳ್ಳಿ ಮತ್ತು ಹಿರಿಯೂರು ಭಾಗದ ಉಸ್ತುವಾರಿ ವಹಿಸಿಕೊಂಡಿದ್ದಾರೆ.



Join Whatsapp