ಮಂಡ್ಯ: ಅತಿ ವೇಗವಾಗಿ ಹೋಗುತ್ತಿದ್ದ ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದು ದೇವಸ್ಥಾನದ ಕಾಂಪೌಂಡ್ ಮೇಲೆ ಹತ್ತಿ ನಿಂತು ಓರ್ವ ಸಾವನ್ನಪ್ಪಿದ ಘಟನೆ ಕಲ್ಲಹಳ್ಳಿ ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಬಳಿ ನಡೆದಿದೆ.
ಸಿದ್ದಯ್ಯನಕೊಪ್ಪಲು ಗ್ರಾಮದ ಸತೀಶ್ (40)ಮೃತಪಟ್ಟವರು. ಡಿಕ್ಕಿಯ ರಭಸಕ್ಕೆಬಿಸಿಲುಮಾರಮ್ಮ ದೇವಸ್ಥಾನದ ಕಾಂಪೌಂಡ್ ಗೋಡೆ ಕುಸಿದಿದೆ.
ಬೆಂಗಳೂರಿನಿಂದ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಲ್ಲಹಳ್ಳಿ ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಬಿಸಿಲುಮಾರಮ್ಮ ದೇವಸ್ಥಾನದ ಬಳಿ ಸ್ಕೂಟರ್ ಗೆ ಡಿಕ್ಕಿ ಹೊಡೆದು ಬಳಿಕ ಬಿಸಿಲು ಮಾರಮ್ಮ ದೇವಸ್ಥಾನದ ಕಾಂಪೌಂಡ್ ಮೇಲೆ ಹತ್ತಿ ನಿಂತಿದೆ. ಘಟನೆಯಲ್ಲಿ ಸತೀಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಸತೀಶ್ ತೆಂಗಿನ ಕಾಯಿ ವ್ಯಾಪಾರ ಮುಗಿಸಿಕೊಂಡು ಮನೆಗೆ ತೆರಳುವ ವೇಳೆ ಈ ಘಟನೆ ಜರುಗಿದ್ದು, ಅಪಘಾತವಾದ ತಕ್ಷಣವೇ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಂದು ವೇಳೆ ಬಿಸಿಲುಮಾರಮ್ಮ ದೇಗುಲದ ಕಾಂಪೌಂಡ್ಗೆ ಡಿಕ್ಕಿಯಾಗಿ ಕಾರ್ ನಿಲ್ಲದಿದ್ದರೆ, ಇನ್ನಷ್ಟು ಅನಾಹುತಗಳು ಜರುಗುವ ಸಾಧ್ಯತೆ ಇತ್ತು. ಮಂಡ್ಯ ಪಶ್ಚಿಮ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.