ಸಾಲ ಬಾಧೆಯಿಂದ ಮನನೊಂದು ಯುವಕ ಆತ್ಮಹತ್ಯೆ

Prasthutha|

ಚಾಮರಾಜನಗರ: ಸಾಲ ಭಾದೆ ತಾಳಲಾರದೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಕಲ್ಲಹಳ್ಳಿ ಯಲ್ಲಿ ನಡೆದಿದೆ.
ಕಲ್ಲಹಳ್ಳಿ ಗ್ರಾಮದ ಸಚಿನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಖಾಸಗಿ ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ‌ದಲ್ಲಿದ್ದ ಈತ ಕೈತುಂಬಾ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ‌. ಇದರಿಂದ ಮಾನಸಿಕ ಒತ್ತಡ ತಾಳಲಾರದೆ ಡ್ಯಾಮ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ಮೊದಲು ತನ್ನ‌ ಸ್ನೇಹಿತರಿಗೆ ವಾಟ್ಸಾಪ್ ಸಂದೇಶ ಕಳುಹಿಸಿರುವ ಸಚಿನ್ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು ಮನೆಯವರಿಗೆ ತಿಳಿಸುವಂತೆ ಹೇಳಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಗುಂಡ್ಲುಪೇಟೆ ಪೊಲೀಸರು ಮೃತದೇಹ ಮೇಲಕ್ಕೆತ್ತಿದ್ದಾರೆ. ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp