ಮುಸ್ಲಿಮರು, ಕ್ರಿಶ್ಚಿಯನ್ನರ ಮೀಸಲಾತಿ ರದ್ದುಗೊಳಿಸಲು ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಬಿಜೆಪಿ ಶಾಸಕ

Prasthutha|

ಬೆಂಗಳೂರು: ಮುಸ್ಲಿಮರಿಗೆ ಒಬಿಸಿ ಕೋಟಾದಲ್ಲಿ ನೀಡಿರುವ ಸೌಲಭ್ಯಗಳನ್ನು ಕಡಿತಗೊಳಿಸಿ ಅದನ್ನು ಲಿಂಗಾಯತ, ಪಂಚಮಸಾಲಿ ಹಾಗೂ ಇತರ ಲಿಂಗಾಯತ ಒಳಪಂಗಡಗಳಿಗೆ ನೀಡಬೇಕು ಎಂದು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಚಂದ್ರಕಾಂತ ಬೆಲ್ಲದ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

- Advertisement -

ಸಂವಿಧಾನದ ಪ್ರಕಾರ ಜಾತಿಗಳ ಆಧಾರದಲ್ಲಿ ಮೀಸಲಾತಿ ಇದೆ. ಆದರೆ ಧರ್ಮಗಳ ಪ್ರಕಾರ ಯಾವುದೇ ರೀತಿಯ ಮೀಸಲಾತಿ ಇರುವುದಿಲ್ಲ. ಈ ಹಿಂದಿನ ಕಾಂಗ್ರೆಸ್ ಸರ್ಕಾರ, ಹಿಂದುಳಿದ ವರ್ಗಗಳ (ಒಬಿಸಿ) ಗಳಿಗೆ ನೀಡಬೇಕಾಗಿರುವ ಹಕ್ಕನ್ನು ಮುಸ್ಲಿಮ್ ಹಾಗೂ ಕ್ರಿಶ್ಚಿಯನ್ ಸಮಾಜಕ್ಕೆ ನೀಡಿದ್ದಾರೆ. ಈ ಧರ್ಮಗಳೆಲ್ಲವೂ ಅಲ್ಪಸಂಖ್ಯಾತರ ಇಲಾಖೆಗೆ ಒಳಪಟ್ಟಿದ್ದು, ಈ ಇಲಾಖೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಅನುದಾನ ಬರುತ್ತಿದೆ. ಈ ನಿಟ್ಟಿನಲ್ಲಿ ಸಾಕಷ್ಟು ಅಭಿವೃದ್ಧಿಗಳು ಆಗುತ್ತಿವೆ. ಆದರೆ ಹಿಂದುಳಿದ ವರ್ಗಗಳ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಲು ಕ್ರಿಶ್ಚಿಯನ್ ಮತ್ತು ಮುಸ್ಲಿಮ್ ಸಮಾಜಗಳಿಗೆ ಒಬಿಸಿ ಕೋಟಾದಲ್ಲಿ ನೀಡಿರುವ ಸೌಲಭ್ಯಗಳನ್ನು ಕಡಿತಗೊಳಿಸಿ ಪ್ರಸ್ತುತ ಮೀಸಲಾತಿ ಕೇಳುತ್ತಿರುವ ಲಿಂಗಾಯತ ಪಂಚಮಸಾಲಿ, ಉಳಿದ ಎಲ್ಲಾ ಲಿಂಗಾಯತ ಒಳಪಂಗಡಗಳು, ಕುರುಬ, ಮರಾಠ ಇತ್ಯಾದಿ ಸಮಾಜಗಳಿಗೆ ನೀಡಿ, ಕಳೆದ ಹಲವು ವರ್ಷಗಳಿಂದ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಅರವಿಂದ ಬೆಲ್ಲದ್ ಪತ್ರದಲ್ಲಿ ಆಗ್ರಹಿಸಿದ್ದಾರೆ.



Join Whatsapp