ಬೆಂಗಳೂರು: ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳು, ಪರಿಶಿಷ್ಟರು ಜಾತಿ ಮತ್ತು ಪಂಗಡದವರು ಸೇರಿದಂತೆ ಎಲ್ಲಾ ವರ್ಗಗಳಿಗೆ ಮೀಸಲಾತಿ ಪದ್ದತಿಯನ್ನು ಶಾಶ್ವತವಾಗಿ ರದ್ದುಗೊಳಿಸುವುದೇ ಬಿಜೆಪಿ ಹಾಗೂ ಆರ್ ಎಸ್ ಎಸ್ ನ ಹಿಡನ್ ಅಜೆಂಡಾ ಎಂದು ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್ ಟೀಕಿಸಿದ್ದಾರೆ.
ಟ್ವೀಟ್ ಮಾಡಿರುವ ಅವರು, 2ಬಿಯಲ್ಲಿರುವ ಅಲ್ಪಸಂಖ್ಯಾತ ಮೀಸಲಾತಿ ರದ್ದತಿ ಬಗ್ಗೆ ಬಿಜೆಪಿ ಶಾಸಕ ನೀಡಿರುವ ಸಂವಿಧಾನ ವಿರೋಧಿ ಹೇಳಿಕೆಯು ಬಿಬಿಎಂಪಿ ಹಾಗೂ ಸ್ಥಳಿಯ ಸಂಸ್ಥೆಗಳ ಚುನಾವಣಾ ಮೀಸಲಾತಿಯನ್ನು ಗೊಂದಲಮಯಗೊಳಿಸಿ ವ್ಯವಸ್ಥಿತವಾಗಿ ರದ್ದುಪಡಿಸಿದಂತೆ, ಈ ಬಾರಿಯೂ 2A, 2B ಎಂದು ಇನ್ನಷ್ಟು ಕಗ್ಗಂಟುಗೊಳಿಸಿ ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳು, ಪರಿಶಿಷ್ಟರು ಜಾತಿ ಮತ್ತು ಪಂಗಡದವರು ಸೇರಿದಂತೆ ಎಲ್ಲಾ ವರ್ಗಗಳಿಗೆ ಮೀಸಲಾತಿ ಪದ್ದತಿಯನ್ನು ಶಾಶ್ವತವಾಗಿ ರದ್ದುಗೊಳಿಸುವುದೇ ಬಿಜೆಪಿ ಹಾಗೂ ಆರ್ ಎಸ್ ಎಸ್ ನ ಹಿಡನ್ ಅಜೆಂಡಾ ಎಂದು ಆರೋಪಿಸಿದ್ದಾರೆ.
ಮೀಸಲಾತಿ ರದ್ದುಗೊಳಿಸುವಂತೆ ಕೋರ್ಟ್ ಮೆಟ್ಟಿಲೇರಿದ್ದು ಬಿಜೆಪಿ ಆರ್ ಎಸ್ ಎಸ್ ನ ರಾಮಾ ಜೋಯಿಸ್ ಅವರು ಎಂಬುದು ಯಾರು ಮರೆಯಬಾರದು ಎಂದು ಖಾದರ್ ಹೇಳಿದ್ದಾರೆ.