ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ ಇಂದು ಅಪರಾಹ್ನ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.
ಗುಜರಾತ್ ಅಸೆಂಬ್ಲಿಯ ಅವಧಿ ಮುಂದಿನ ವರ್ಷ ಫೆಬ್ರವರಿ 18ರಂದು ಮತ್ತು ಹಿಮಾಚಲ ಪ್ರದೇಶದ ಅವಧಿಯು ಜನವರಿ 8ರಂದು ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಇತ್ತೀಚೆಗೆ ಚುನಾವಣಾ ಸಿದ್ಧತೆಯನ್ನು ಪರಿಶೀಲನೆ ನಡೆಸಲು ಎರಡೂ ರಾಜ್ಯಗಳಿಗೆ ಭೇಟಿ ನೀಡಿದ್ದರು.
ಗುಜರಾತ್ ಅಸೆಂಬ್ಲಿಯು 182 ಸ್ಥಾನಗಳನ್ನು ಹೊಂದಿದ್ದು, ಬಹುಮತಕ್ಕಾಗಿ 92 ಸ್ಥಾನಗಳ ಅಗತ್ಯವಿದೆ. 68 ಸ್ಥಾನಗಳ ಹಿಮಾಚಲ ಪ್ರದೇಶದಲ್ಲಿ ಬಹುಮತಕ್ಕೆ 35 ಸ್ಥಾನಗಳನ್ನು ಪಡೆಯಬೇಕಾಗಿದೆ.
2017ರ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 44, ಕಾಂಗ್ರೆಸ್ 21 ಸ್ಥಾನಗಳನ್ನು ಪಡೆದಿದ್ದರೆ, ಗುಜರಾತಿನಲ್ಲಿ ಬಿಜೆಪಿ 99, ಕಾಂಗ್ರೆಸ್ 77 ಸ್ಥಾನಗಳನ್ನು ಗಳಿಸಿದ್ದವು.
ಮುಂದಿನ ಚುನಾವಣೆಯ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳಲ್ಲಿ ಪ್ರಧಾನಿ ಮೋದಿ ಸೇರಿದಂತೆ ಉಭಯ ಪಕ್ಷಗಳ ಉನ್ನತ ನಾಯಕರ ಜಾಥಾ ಮತ್ತು ಭೇಟಿಗಾಗಿ ವೇದಿಕೆಯನ್ನು ಸಿದ್ಧಪಡಿಸಲಾಗಿದೆ.