ಜ್ಞಾನವ್ಯಾಪಿ ಮಸೀದಿ: ಕಾರ್ಬನ್ ಡೇಟಿಂಗ್ ಗೆ ಅನುಮತಿ ನಿರಾಕರಿಸಿದ ನ್ಯಾಯಾಲಯ

Prasthutha|

ವಾರಣಾಸಿ: ಜ್ಞಾನವ್ಯಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿದೆ ಎನ್ನಲಾದ ಶಿವಲಿಂಗದ ಬಗ್ಗೆ ಕಾರ್ಬನ್ ಡೇಟಿಂಗ್ ನಡೆಸುವಂತೆ ಹಿಂದೂ ಪಕ್ಷಕಾರರು ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ನ್ಯಾಯಾಲಯ ವಜಾಗೊಳಿಸಿದ್ದು, ಕಾರ್ಬನ್ ಡೇಟಿಂಗ್ ಪರೀಕ್ಷೆಗೆ ಅವಕಾಶ ನಿರಾಕರಿಸಿದೆ.

- Advertisement -


ವಾರಣಾಸಿ ನ್ಯಾಯಾಲಯ ವಾರಣಾಸಿಯ ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ್ ಅವರ ಪೀಠವು ಈ ಆದೇಶವನ್ನು ನೀಡಿ, ನಾಲ್ವರು ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಮಸೀದಿಯ ಆವರಣದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಅದರ ಕಾರ್ಬನ್ ಡೇಟಿಂಗ್ ಕೋರಿ ಹಿಂದೂ ಕಡೆಯವರು ಅರ್ಜಿಯನ್ನು ಸಲ್ಲಿಸಿದ್ದರು. ಇದನ್ನು ಮುಸ್ಲಿಂ ಕಡೆಯ ಅಂಜುಮನ್ ಇಸ್ಲಾಮಿಯಾ ಸಮಿತಿ ಮಾತ್ರವಲ್ಲದೇ ಹಿಂದೂ ಪಕ್ಷದ ವಾದಿ ನಂಬರ್ 1 ರಾಖಿ ಸಿಂಗ್ ಕೂಡ ವಿರೋಧಿಸಿದ್ದರು. ಕಾರ್ಬನ್ ಡೇಟಿಂಗ್ , ಅದರ ರಚನೆಯನ್ನು ಹಾನಿಗೊಳಿಸುತ್ತದೆ ಎಂದು ವಕೀಲರು ನ್ಯಾಯಾಲಯದಲ್ಲಿ ಆಕ್ಷೇಪಣೆ ಸಲ್ಲಿಸಿದ್ದರು.


ಕಾರ್ಬನ್ ಡೇಟಿಂಗ್ ಎನ್ನುವುದು ಪುರಾತತ್ತ್ವ ಶಾಸ್ತ್ರದ ವಸ್ತು ಅಥವಾ ಪುರಾತತ್ತ್ವ ಶಾಸ್ತ್ರದ ಸಂಶೋಧನೆಗಳ ವಯಸ್ಸನ್ನು (ಪ್ರಾಚೀನತೆ) ಕಂಡುಹಿಡಿಯುವ ವೈಜ್ಞಾನಿಕ ಪ್ರಕ್ರಿಯೆಯಾಗಿದೆ.




Join Whatsapp