ಹಿಮಾಚಲ ಪ್ರದೇಶದಲ್ಲಿ  ಹಳೇ ಪಿಂಚಣಿ ಯೋಜನೆ ಮರುಜಾರಿ: ಪ್ರಿಯಾಂಕಾ ಗಾಂಧಿ

Prasthutha|

ಶಿಮ್ಲಾ: ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್  ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. 

- Advertisement -

ಹಿಮಾಚಲ ಪ್ರದೇಶದ ಸೋಲನ್‌ನ ಥೋಡೊ ಮೈದಾನ್‌ನಲ್ಲಿ ಶುಕ್ರವಾರ ಕಾಂಗ್ರೆಸ್ ವತಿಯಿಂದ  ‘ಪರಿವರ್ತನಾ ಪ್ರತಿಜ್ಞಾ’ ರ್ಯಾ ಲಿ ನಡೆಯಿತು. ಇದರಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೊದಲ ಸಚಿವ ಸಂಪುಟ ಸಭೆಯಲ್ಲೇ ಹಳೆಯ ಪಿಂಚಣಿ ಯೋಜನೆ ಮರುಜಾರಿಗೊಳಿಸುತ್ತೇವೆ ಎಂದಿದ್ದಾರೆ. ಅಲ್ಲದೆ,   ನಿರುದ್ಯೋಗಿ ಯುವಜನರಿಗೆ ಒಂದು ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಿಯಾಂಕ ಚುನಾವಣಾ ರ್ಯಾ ಲಿಯಲ್ಲಿ ಪಕ್ಷದ ಸಿದ್ಧಾಂತ ಪ್ರತಿಪಾದಿಸುವ ಗೀತೆಯನ್ನೂ ಬಿಡುಗಡೆ ಮಾಡಿದರು.

ಊನಾ ಮತ್ತು ಚಂಬಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ರ್ಯಾೆಲಿಗಳನ್ನು ನಡೆಸಿದ ಮರುದಿನ ಪ್ರಿಯಾಂಕಾ ಪಕ್ಷದ ರ್ಯಾ ಲಿಯಲ್ಲಿ ಪಾಲ್ಗೊಂಡಿದ್ದಾರೆ.

- Advertisement -

ಹಿಮಾಚಲ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ಸಿಂಗ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ, ಛತ್ತೀಸ್‌ಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಪಕ್ಷದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸುಖವಿಂದರ್ ಸುಖು ಮತ್ತು ಹಿರಿಯ ನಾಯಕ ರಾಜೀವ್ ಶುಕ್ಲಾ ರ್ಯಾ ಲಿಯಲ್ಲಿ ಮಾತನಾಡಿದರು.



Join Whatsapp