ಪುತ್ತೂರು: ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.
ಶೀಘ್ರದಲ್ಲೇ ನಾಮಕರಣ ಸಮಾರಂಭ ಅರ್ಥಪೂರ್ಣವಾಗಿ ನಡೆಸಲಾಗುವುದು ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಸಂಜೀವ ಮಠಂದೂರು, ಸಾರಿಗೆ ಸಚಿವರಾದ ಶ್ರೀರಾಮುಲು, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ವಿ ಸುನಿಲ್ ಕುಮಾರ್, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್ ಅಂಗಾರ ಅವರನ್ನು ಆಮಂತ್ರಿಸಿ ಕೆಎಸ್ ಆರ್ ಟಿಸಿ ವತಿಯಿಂದ ಕಾರ್ಯಕ್ರಮ ಮಾಡಲಾಗುವುದು.
ಈ ಸಂದರ್ಭದಲ್ಲಿ ನಾಮಫಲಕ ಅಳವಡಿಕೆ, ಅವಳಿ ವೀರರ ಪ್ರತಿಮೆ ಅನಾವರಣ ಮತ್ತು ಕೋಟಿ ಚೆನ್ನಯರ ಸಂಕ್ಷಿಪ್ತ ಇತಿಹಾಸವಿರುವ ಫಲಕ ಅನಾವರಣ ನಡೆಯಲಿದೆ ಎಂದು ಹೇಳಿದರು.