ರಾಹುಲ್ ಗಾಂಧಿಗೆ ಬಾಡಿ ಫಿಟ್ನೆಸ್ ಇದೆ, ಮೆಂಟಲ್ ಫಿಟ್ನೆಸ್ ಇದೆಯಾ?: ಶೋಭಾ ಕರಂದ್ಲಾಜೆ ಪ್ರಶ್ನೆ

Prasthutha|

ಉಡುಪಿ: ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ  ರಾಹುಲ್ ಗಾಂಧಿಯ ಫಿಟ್ನೆಸ್ (ದೇಹದಾರ್ಢ್ಯ) ಪ್ರದರ್ಶನವಾಗುತ್ತಿದೆ ಹೊರತು ಇನ್ನೇನು ಪ್ರಯೋಜನವಿಲ್ಲ ಎಂದು  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ಲೇವಡಿ ಮಾಡಿದ್ದಾರೆ. ದೇಶದ ನಾಯಕತ್ವ ವಹಿಸಲು ರಾಹುಲ್ ಗೆ ಸಾಧ್ಯನಾ? ಪಕ್ಷದ ನೇತೃತ್ವ ವಹಿಸಲು ಸಾಧ್ಯವಾಗದವರಿಂದ ದೇಶದ ನೇತೃತ್ವ ವಹಿಸಲು ಸಾಧ್ಯವೇ ಎಂದು ಪ್ರಶ್ನಿಸಿದರು.

- Advertisement -

ಪ್ರಧಾನಿ ನರೇಂದ್ರ ಮೋದಿಗೆ ಸರಿಸಾಟಿಯಾಗುವ ರಾಹುಲ್ ಕನಸು ನನಸಾಗಲ್ಲ. ಬಾಡಿ ಫಿಟ್ನೆಸ್ ಇದೆ, ಮೆಂಟಲ್ ಫಿಟ್ನೆಸ್ ಇದ್ದಾರಾ? ದೇಶವನ್ನು ಆಳಲು ಮೆಂಟಲಿ ಫಿಟ್ನೆಸ್ ಇದ್ದಾರೋ ಇಲ್ಲವೊ ಎನ್ನುವುದನ್ನು ದೇಶದ ಜನ ತೀರ್ಮಾನ ಮಾಡುತ್ತಾರೆ ಎಂದು ಕಾಲೆಳೆದಿದ್ದಾರೆ.

ಹಿಜಾಬ್ ಪ್ರಕರಣ ಸಂವಿಧಾನಿಕ ಪೀಠಕ್ಕೆ ವರ್ಗಾವಣೆ ಆಗಬಹುದು. ಇಬ್ಬರು ನ್ಯಾಯಮೂರ್ತಿಗಳು ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಸಂವಿಧಾನಿಕ ಪೀಠದಲ್ಲಿ ಹಿಜಾಬ್ ದೇಶಕ್ಕೆ ಬೇಕೋ ಬೇಡವೋ ಎಂದು ತೀರ್ಮಾನವಾಗುತ್ತದೆ.ಎಲ್ಲಾ ಮಹಿಳೆಯರು ಸ್ವಾತಂತ್ರ್ಯವಾಗಿ ಬದುಕಲು ನ್ಯಾಯಾಲಯ ಅವಕಾಶ ಮಾಡಿಕೊಡಬಹುದು. ಮುಸ್ಲಿಂ ಹೆಣ್ಣು ಮಕ್ಕಳು ಈ ಬಗ್ಗೆ ಗಂಭೀರವಾಗಿ ಆಲೋಚನೆ ಮಾಡಬೇಕು ಎಂದು ಮನವಿಮಾಡಿದರು.

- Advertisement -

ಮುಸ್ಲಿಂ ಮಹಿಳೆಯರಿಗೆ ಅವರ ಮನೆಯವರು, ಗಂಡಸರು  ಹಿಜಾಬ್ ಗೆ ಒತ್ತಾಯ ಮಾಡುತ್ತಿದ್ದಾರೆ. ಮುಸ್ಲಿಂ ಮಹಿಳೆಗೆ ಸ್ವಾತಂತ್ರ್ಯ ಸಿಗಬೇಕಾದರೆ ಹಿಜಾಬ್ ಗೆ ಅವಕಾಶ ಕೊಡಬಾರದು. ನಮ್ಮ ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಿಕ್ಷಣ ಉದ್ಯೋಗ ಸಿಗುವುದು ಮುಖ್ಯ. ಗಂಡಸರು ಹಾಕುವ ತಾಳಕ್ಕೆ ಕುಣಿದು ಇಚ್ಛೆಗೆ ವಿರುದ್ಧವಾಗಿ ನಡೆದುಕೊಳ್ಳಬೇಡಿ. ಪ್ರಗತಿಶೀಲ ದೇಶಗಳು ಧರ್ಮಗಳಲ್ಲಿ ಇರುವ ತಪ್ಪುಗಳನ್ನು ಗುರುತಿಸಿ ಸರಿ ಮಾಡಬೇಕು. ಇರಾನ್ ನ ಮುಸ್ಲಿಂ ಮಹಿಳೆಯರು ಭಾರತಕ್ಕೆ ಮಾರ್ಗದರ್ಶಕ ಆಗಬೇಕು ಎಂದು ಹೇಳಿದರು.



Join Whatsapp