ಕರಾವಳಿ ಸೇರಿ ರಾಜ್ಯದ ಹಲವೆಡೆ ನಾಲ್ಕೈದು ದಿನ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

Prasthutha|

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯ ಹಿನ್ನೆಲೆಯಲ್ಲಿ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ನಾಲ್ಕೈದು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ. ಅಕ್ಟೋಬರ್ 20ರಿಂದ 22ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



Join Whatsapp