ನವದೆಹಲಿ: ಪ್ರಧಾನಿ ಮೋದಿ ಅವರು ಮಹಿಳೆಯರನ್ನು ಗೌರವಿಸುವ ಬಗ್ಗೆ ಹೇಳುತ್ತಿದ್ದರೂ, ವಾಸ್ತವದಲ್ಲಿ ಅವರು ಅತ್ಯಾಚಾರಿಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಬಿಡುಗಡೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಗುಜರಾತ್ ಸರ್ಕಾರ ತಿಳಿಸಿದ ಒಂದು ದಿನದ ಬಳಿಕ ರಾಹುಲ್ ಗಾಂಧಿ ಅವರು ಈ ಹೇಳಿಕೆ ನೀಡಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಅವರು ಕೆಂಪು ಕೋಟೆಯಿಂದ ಮಹಿಳೆಯರ ಗೌರವದ ಬಗ್ಗೆ ಮಾತನಾಡುತ್ತಾರೆ. ಆದರೆ ವಾಸ್ತವದಲ್ಲಿ ಅವರು ಅತ್ಯಾಚಾರಿಗಳ ಜೊತೆಗಿದ್ದಾರೆ. ಪ್ರಧಾನಿ ಅವರ ಭರವಸೆ ಮತ್ತು ಉದ್ದೇಶಗಳ ನಡುವಿನ ವ್ಯತ್ಯಾಸ ಸ್ಪಷ್ಟವಾಗಿದೆ. ಅವರು ಮಹಿಳೆಯರಿಗೆ ಮೋಸ ಮಾಡಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಬಿಲ್ಕಿಸ್ ಬಾನು ಪ್ರಕರಣದಲ್ಲಿ ಅಪರಾಧಿಗಳಿಗೆ ನೀಡಲಾದ ವಿನಾಯಿತಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳಿಗೆ ವಿರುದ್ಧವಾಗಿ ಸಲ್ಲಿಸಲಾದ ಅಫಿದವಿತ್’ನಲ್ಲಿ ಕೇಂದ್ರ ಸರ್ಕಾರ ಕೂಡ ಇದಕ್ಕೆ ಸಹಮತ , ಅನುಮೋದನೆಯನ್ನು ನೀಡಿದೆ ಎಂದು ಹೇಳಿದೆ.