ಜಕಾರ್ತ: ಕಾಲ್ತುಳಿತದಿಂದಾಗಿ 130 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದ ಇಂಡೋನೇಷ್ಯಾದ ಫುಟ್ಬಾಲ್ ಕ್ರೀಡಾಂಗಣವನ್ನು ನೆಲಸಮ ಮಾಡಲು ನಿರ್ಧರಿಸಲಾಗಿದೆ.
ಇಂಡೋನೇಷ್ಯಾದ ಅಧ್ಯಕ್ಷ ಜೊಕೊ ವಿಡೋಡೋ ವಿಶ್ವ ಫುಟ್ಬಾಲ್ ಆಡಳಿತ ಮಂಡಳಿ ಫಿಫಾದ ಮುಖ್ಯಸ್ಥ ಜಿಯಾನಿ ಇನ್ಫಾಂಟಿನೋ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಕ್ರೀಡಾಂಗಣವನ್ನು ನೆಲಸಮಗೊಳಿಸುವುದಾಗಿ ತಿಳಿಸಿದ್ದಾರೆ. ಮಾತ್ರವಲ್ಲದೇ ಆ ಕ್ರೀಡಾಂಗಣವನ್ನು ಮರು ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ.
ಈ ತಿಂಗಳ ಆರಂಭದಲ್ಲಿ ಮಲಾಂಗ್ ನಲ್ಲಿರುವ ಕಂಜುರುಹಾನ್ ಕ್ರೀಡಾಂಗಣದಲ್ಲಿ ಕಾಲ್ತುಳಿತ ಉಂಟಾಗಿ 130ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.