ಬೊಮ್ಮಾಯಿ ಸಿಎಂ ಸ್ಥಾನ ಉಳಿಸಿಕೊಳ್ಳಬೇಕಾದರೆ RSS ನಾಯಕರ ಪಾದಪೂಜೆ ಮಾಡಲೇಬೇಕು: ಸಿದ್ದರಾಮಯ್ಯ

Prasthutha|

ಬೆಂಗಳೂರು: ಬಸವರಾಜ ಬೊಮ್ಮಾಯಿ ಸಿಎಂ ಸ್ಥಾನ ಉಳಿಸಿಕೊಳ್ಳಬೇಕಾದರೆ RSS ನಾಯಕರ ಪಾದಪೂಜೆ ಮಾಡಲೇಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಿಮ್ಮ ಖಾಲಿ ಡಬ್ಬದ ಸದ್ದಿಗೆ ಹೆದರುವವರು ಯಾರೂ ಇಲ್ಲ. ನಿಮ್ಮ ಧಮ್ –ತಾಖತ್ ಗಳ ಮಾತುಗಳೆಲ್ಲವೂ ಸಾರ್ವಜನಿಕ ಸಭೆಗಳಿಗಷ್ಟೇ ಸೀಮಿತ ಎಂದು ವ್ಯಂಗ್ಯವಾಡಿದ್ದಾರೆ.


ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಬೇಕಾದರೆ ಮತ್ತೆ ನೀವು ಆರ್ ಎಸ್ ಎಸ್ ನಾಯಕರ ಮನೆಗೆ ತೆರಳಿ ಪಾದಪೂಜೆ ಮಾಡಲೇಬೇಕು ಎಂದು ಹೇಳಿದ್ದಾರೆ.

- Advertisement -

ಬೊಮ್ಮಾಯಿಯವರೇ,  ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರನ್ನು ಪ್ರಧಾನಮಂತ್ರಿ ಸ್ಥಾನದಲ್ಲಿ ನೀವು ಕಾಣಬಯಸಿದರೆ ನಮ್ಮದೇನೂ ಅಭ್ಯಂತರ ಇಲ್ಲ. ಆದರೆ ನಮ್ಮ ನಾಯಕರು ಜನಮತದ ಬೆಂಬಲದಿಂದಲೇ ಪ್ರಧಾನಿಯಾಗುವವರು. ನಿಮ್ಮ ಹಾಗೆ ಆಪರೇಷನ್ ಕಮಲದ ಮೂಲಕ ಆ ಸ್ಥಾನಕ್ಕೆ ಏರುವವರಲ್ಲ ಎಮದು ಲೇವಡಿ ಮಾಡಿದ್ದಾರೆ.  

ಅಕ್ರಮಗಳು ಯಾರ ಕಾಲದಲ್ಲಿ ನಡೆದರೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಹೇಳುತ್ತಾ ಬಂದವನು ನಾನು. ಇದಕ್ಕಾಗಿಯೇ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿಯೇ ನ್ಯಾಯಾಂಗ ತನಿಖೆ ನಡೆಸಬೇಕೆಂದು ಹಿಂದೆ ಮಾಡಿರುವ ಒತ್ತಾಯವನ್ನು ಪುನರುಚ್ಚರಿಸುತ್ತೇನೆ ಎಂದು ಹೇಳಿದ್ದಾರೆ.

ಕೊಟ್ಟ ಕುದರೆ ಏರಲಿಕ್ಕಾಗದವನು ವೀರನೂ ಅಲ್ಲ, ಶೂರನೂ ಅಲ್ಲ ಎಂಬ ಗಾದೆಯನ್ನು ಮತ್ತೆ ಮತ್ತೆ ನಿಜಮಾಡಲು ಹೊರಟಿರುವ

ಬೊಮ್ಮಾಯಿಯವರೇ, ವಿರೋಧಪಕ್ಷಗಳ ವಿರುದ್ಧ ಆರೋಪ ಮಾಡಿಕೊಂಡು ಕಾಲಕಳೆಯುತ್ತಾ ಮುಖ್ಯಮಂತ್ರಿ ಸ್ಥಾನದ ಮರ್ಯಾದೆ ಕಳೆದುಕೊಳ್ಳಬೇಡಿ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕರ ಅಕ್ರಮಗಳ ಬಗ್ಗೆ ರಾಹುಲ್ ಗಾಂಧಿ ಅವರೇ ತನಿಖೆ ನಡೆಸಿ ಶಿಕ್ಷೆ ಕೊಡಬೇಕಾದರೆ ಮೊದಲು

ನರೇಂದ್ರ ಮೋದಿ ಪ್ರಧಾನಿ ಸ್ಥಾನಕ್ಕೆ   ಮತ್ತು ನೀವು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ತಪ್ಪಿತಸ್ಥರನ್ನು ಶಿಕ್ಷಿಸುವ ಕೆಲಸ ನಾವು ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನಾಯಕರ ಅಕ್ರಮದ ದಾಖಲೆಗಳನ್ನು ರಾಹುಲ್ ಗಾಂಧಿ  ಅವರಿಗೆ ಕಳುಹಿಸಿ ಕ್ರಮಕೈಗೊಳ್ಳಲು ಒತ್ತಾಯಿಸುತ್ತೇನೆ ಎಂದು ಹೇಳಿರುವ ಮುಖ್ಯಮಂತ್ರಿ ಬೊಮ್ಮಾಯಿಯವರೇ, ಸದ್ಯಕ್ಕೆ ದೇಶದ ಪ್ರಧಾನಿ  ನರೇಂದ್ರ ಮೋದಿ ಅವರು, ರಾಹುಲ್ ಗಾಂಧಿ ಅಲ್ಲ ಎನ್ನುವುದು ನಿಮ್ಮ ನೆನಪಲ್ಲಿ ಇರಲಿ ಎಂದು ಹೇಳಿದ್ದಾರೆ.

 



Join Whatsapp