ಬೆಂಗಳೂರು: ಸೀಟ್ ಬೆಲ್ಟ್ ಧರಿಸದ ಕಾರಣ ವಾಹನ ಚಲಾಯಿಸಿದರೆ ದಂಡದ ಪ್ರಮಾಣ ದುಪ್ಪಟ್ಟಾಗಲಿದೆ.
ಐದು ನೂರು ರೂಪಾಯಿ ಇದ್ದ ದಂಡದ ಹಣವನ್ನು ಒಂದು ಸಾವಿರಕ್ಕೆ ಏರಿಸಲಾಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಸೂಚನೆ ಮೇರೆಗೆ ಡಿಜಿ-ಐಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.
ನವೆಂಬರ್ 1, 2022ರಿಂದ ಮುಂಬೈನಲ್ಲಿ ವಾಹನ ಚಾಲನೆ ವೇಳೆಯಲ್ಲಿ ಸೀಟ್ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಕರ್ನಾಟಕದಲ್ಲಿ ಇಂದಿನಿಂದಲೇ ಜಾರಿಗೆ ಬರುವಂತೆ ವಾಹನ ಚಾಲನೆ ವೇಳೆ ಸೀಟ್ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಸೀಟ್ ಬೆಲ್ಟ್ ಧರಿಸದೇ ವಾಹನ ಚಲಾಯಿಸಿದರೆ ಐದು ನೂರು ರೂ. ದಂಡ ಹಾಕಲಾಗುತ್ತಿತ್ತು. ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದಲೇ ನೂತನ ದಂಡವನ್ನು ನಿಗದಿಪಡಿಸಲಾಗಿದೆ.