ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಚಂಡಮಾರುತ ಸಾಧ್ಯತೆ; ಹವಾಮಾನ ಇಲಾಖೆ ವರದಿ

Prasthutha|

ಕೋಲ್ಕತ್ತಾ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಮುಂದಿನ ನಾಲ್ಕು ದಿನಗಳಲ್ಲಿ ಚಂಡಮಾರುತ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಆಗ್ನೇಯ, ಪೂರ್ವ-ಮಧ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆಯಲ್ಲಿ ಅಕ್ಟೋಬರ್ 22 – 24ರೊಳಗೆ ಚಂಡಮಾರುತ ಬೀಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಈ ಚಂಡಮಾರುತವು ಪಶ್ಚಿಮ ವಾಯುವ್ಯದ ಕಡೆಗೆ ಚಲಿಸುವ ಸಾಧ್ಯತೆಯಿದ್ದು, ಅಕ್ಟೋಬರ್ 22ರ ವೇಳೆಗೆ ಮಧ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯ ಮೇಲೆ ಕೇಂದ್ರೀಕರಿಸಲಿದೆ. ಇದು ಮುಂದಿನ 48 ಗಂಟೆಗಳಲ್ಲಿ ಪಶ್ಚಿಮ ಮಧ್ಯ ಬಂಗಾಳಕೊಲ್ಲಿಯಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಈ ಮಧ್ಯೆ ಸಂಭವನೀಯ ಚಂಡಮಾರುತದ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರವು ಏಳು ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಿದೆ. ಇದರಿಂದಾಗಿ ಗಂಜಾಂ, ಪುರಿ, ಖುರ್ದಾ, ಜಗತ್ ಸಿಂಗ್ ಪುರ, ಕೇಂದ್ರಪದ, ಭದ್ರಕ್ ಮತ್ತು ಬಾಲಸೋರ್ ಜಿಲ್ಲೆಗಳಿಗೆ ಸಮಸ್ಯೆಯಾಗಲಿದೆ ಎಂದು ತಿಳಿದುಬಂದಿದೆ.

ಅಕ್ಟೋಬರ್ 23ರಂದು ಪುರಿ, ಕೇಂದ್ರಪದ ಮತ್ತು ಜಗತ್‌ ಸಿಂಗ್‌ ಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



Join Whatsapp