ಆಮ್ನೆಸ್ಟಿ ಇಂಟರ್ ನ್ಯಾಷನಲ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

Prasthutha|

ನವದೆಹಲಿ: ತನ್ನ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಇ.ಡಿ.ಯ ವಿರುದ್ಧ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

- Advertisement -

ಈ ಬಗ್ಗೆ ವಿಚಾರಣೆ ನಡೆಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ನೇತೃತ್ವದ ನ್ಯಾಯಪೀಠವು, ತಾತ್ಕಾಲಿಕ ಮುಟ್ಟುಗೋಲು ಆದೇಶವನ್ನು ಪ್ರಶ್ನಿಸುವ ಅಮ್ನೆಸ್ಟಿಯ ಹಕ್ಕನ್ನು ಕಾಯ್ದಿರಿಸಿ ವಿಶೇಷ ರಜೆ ಅರ್ಜಿಯನ್ನು ವಜಾಗೊಳಿಸಿತು.

ಪಿಎಂಎಲ್ ಎ ನ್ಯಾಯನಿರ್ಣಯ ಪ್ರಾಧಿಕಾರವು ಅಕ್ಟೋಬರ್ 7, 2022 ರಂದು ತಾತ್ಕಾಲಿಕ ಮುಟ್ಟುಗೋಲು ಆದೇಶವನ್ನು ಹೊರಡಿಸಿದ ಹಿನ್ನೆಲೆಯಲ್ಲಿ, ಜಾರಿ ನಿರ್ದೇಶನಾಲಯವು ತನ್ನ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದನ್ನು ಪ್ರಶ್ನಿಸಿ ಆಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ಕಳೆದ ವಾರ ನಿರಾಕರಿಸಿತ್ತು.



Join Whatsapp