ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಮೊದಲ ವರ್ಷದ ಪುಣ್ಯತಿಥಿ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಗೌರವ ಸಲ್ಲಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದು, ‘ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಪ್ರೀತಿಯ ‘ಅಪ್ಪು’, ಡಾ. ಪುನೀತ್ ರಾಜ್ ಕುಮಾರ್ ಅವರ ಪುಣ್ಯಸ್ಮರಣೆಯಂದು ಅವರಿಗೆ ಪ್ರೀತಿ ಪೂರ್ವಕ ನಮನಗಳು. ಅತಿ ಚಿಕ್ಕ ವಯಸ್ಸಿನಲ್ಲಿ ಅವರು ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಕೈಗೊಂಡ ಜನಸೇವೆಯನ್ನು ವರ್ಣಿಸಲು ಪದಗಳೇ ಸಾಲದು’ ಎಂದು ಬರೆದುಕೊಂಡಿದ್ದಾರೆ.
ಪುನೀತ್ ರಾಜ್ ಕುಮಾರ್ ನೆನಪಲ್ಲಿ ಹಲವು ವಿಶೇಷ ಕಾರ್ಯಕ್ರಮಗಳು ನಡೆಯಲಿದ್ದು, ಈಗಾಗಲೇ ಕಂಠೀರವ ಸ್ಟುಡಿಯೋದ ಪುನೀತ್ ಸಮಾಧಿ ಬಳಿ ಸಂಗೀತ ನಿರ್ದೇಶಕ ಸಾಧು ಕೋಕಿಲ ನೇತೃತ್ವದಲ್ಲಿ ನಿನ್ನೆ ರಾತ್ರಿ 12 ಗಂಟೆಯಿಂದ ಇಂದು ರಾತ್ರಿ 12ಗಂಟೆಯವರೆಗೂ ಸಂಗೀತ ಸುಧೆ ನಡೆಯುತ್ತಿದೆ. ಬೆಳಗ್ಗೆ 9.30ಕ್ಕೆ ಕುಟುಂಬ ಸದಸ್ಯರು ಪುನೀತ್ ಸಮಾಧಿ ಬಳಿ ಆಗಮಿಸಿದ್ದು, ಶಿವರಾಜ್ ಕುಮಾರ್, ಆಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ದೊಡ್ಮನೆ ಕುಟುಂಬದವರು ಪೂಜೆ ಸಲ್ಲಿಸಿದ್ದಾರೆ.
ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಪ್ರೀತಿಯ ಅಪ್ಪು, ಡಾಕ್ಟರ್ ಪುನೀತ್ ರಾಜಕುಮಾರ್ ರವರ ಪುಣ್ಯಸ್ಮರಣೆಯಂದು ಅವರಿಗೆ ಪ್ರೀತಿ ಪೂರ್ವಕ ನಮನಗಳು.
— Basavaraj S Bommai (@BSBommai) October 29, 2022
ಅತಿ ಚಿಕ್ಕ ವಯಸ್ಸಿನಲ್ಲಿ ಅವರು ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಕೈಗೊಂಡ ಜನಸೇವೆಯನ್ನು ವರ್ಣಿಸಲು ಪದಗಳೇ ಸಾಲದು. pic.twitter.com/NKwlckUlDU