ನಾಟಕ ಅಭ್ಯಾಸದ ವೇಳೆ ಆಕಸ್ಮಿಕವಾಗಿ ನೇಣಿಗೆ ಸಿಲುಕಿ ವಿದ್ಯಾರ್ಥಿ ಮೃತ್ಯು

Prasthutha|

ಚಿತ್ರದುರ್ಗ: ಭಗತ್‌ಸಿಂಗ್ ಗಲ್ಲಿಗೇರುವ ಪಾತ್ರದ ಅಭಿನಯ ಅಭ್ಯಾಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೇಣಿಗೆ ಸಿಲುಕಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ನಗರದ ಕೆಳಗೋಟೆಯಲ್ಲಿ ನಡೆದಿದೆ.

- Advertisement -

ನಾಗರಾಜ್ ಮತ್ತು ಭಾಗ್ಯಲಕ್ಷ್ಮಿ ದಂಪತಿಯ ಪುತ್ರ ಸಂಜಯ್ ಗೌಡ (12) ಮೃತ ವಿದ್ಯಾರ್ಥಿ. ಎಸ್.ಎಲ್.ವಿ ಶಿಕ್ಷಣ ಸಂಸ್ಥೆಯಲ್ಲಿ 7ನೇ ತರಗತಿಯಲ್ಲಿ ಸಂಜಯ್‌ ವ್ಯಾಸಂಗ ಮಾಡುತ್ತಿರುವ ಸಂಜಯ್, ನವೆಂಬರ್‌ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಗತ್ ಸಿಂಗ್ ಪಾತ್ರದಲ್ಲಿ ಅಭಿನಯಿಸಬೇಕಿತ್ತು. ಇದಕ್ಕಾಗಿ ಸಿದ್ಧತೆ ಮಾಡಿಕೊಳ್ಳುವ ಸಮಯದಲ್ಲಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶನಿವಾರ ರಾತ್ರಿ ಮನೆಯಲ್ಲಿ ಪೋಷಕರು ಇಲ್ಲದ ಸಂದರ್ಭದಲ್ಲಿ ಸಂಜಯ್ ಭಗತ್ ಸಿಂಗ್ ಪಾತ್ರ ಅಭ್ಯಾಸ ಮಾಡುತ್ತಿದ್ದನು. ನೇಣಿಗೆ ಕೊರಳೊಡ್ಡುವ ಸಂದರ್ಭದ ಅಭಿನಯಕ್ಕೆ ಫ್ಯಾನಿಗೆ ಹಗ್ಗ ಕಟ್ಟಿಕೊಂಡಿದ್ದನು. ಸ್ಟೂಲ್ ಮೇಲೆ ನಿಂತು ಮುಖವನ್ನು ಟೋಪಿಯಿಂದ ಮುಚ್ಚಿಕೊಂಡು ಅಭ್ಯಾಸ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಸ್ಟೂಲ್ ಜಾರಿ ನೇಣು ಬಿಗಿದುಕೊಂಡಿದೆ ಎಂದು ಬಡಾವಣೆ ಠಾಣೆಗೆ ನೀಡಿದ ದೂರಿನಲ್ಲಿ ಪೋಷಕರು ವಿವರಿಸಿದ್ದಾರೆ.



Join Whatsapp