ಚಿತ್ರದುರ್ಗ: ಅತ್ಯಾಚಾರ ಆರೋಪದಡಿ ಜೈಲು ಪಾಲಾಗಿರುವ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ನ್ಯಾಯಾಂಗ ಬಂಧನ ಅವಧಿಯನ್ನು ನ. 8 ರವರೆಗೆ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ಚಿತ್ರದುರ್ಗ 2ನೇ ಅಪರ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ನ. 8 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದು,ಅಲ್ಲಿಯವರೆಗೆ ಶ್ರೀಗೆ ಜೈಲೇ ಗತಿಯಾಗಿದೆ.
ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾಗಿದೆ. ಪೊಲೀಸರು ಮುರುಘಾಶ್ರೀಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ಕೋರ್ಟ್ ಮುರುಘಾ ಶ್ರೀ, ಎ2 ಮಹಿಳಾ ವಾರ್ಡನ್, ಎ4 ಆರೋಪಿ ಪರಮಶಿವಯ್ಯ ನ್ಯಾಯಾಂಗ ಬಂಧನ ಅವಧಿ ನವೆಂಬರ್ 8 ರವರೆಗೆ ವಿಸ್ತರಣೆ ಮಾಡಲಾಗಿದೆ.