ಹಿಮಾಚಲ ಪ್ರದೇಶ ಚುನಾವಣೆ : 23% ಅಭ್ಯರ್ಥಿಗಳಿಗೆ ಕ್ರಿಮಿನಲ್ ಹಿನ್ನಲೆ..!

Prasthutha|

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ 68 ಸ್ಥಾನಗಳಿಗೆ ನವೆಂಬರ್ 12 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಸುಮಾರು 23% ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದು, ಅದರಲ್ಲಿ 12% ಅಭ್ಯರ್ಥಿಗಳು ಗಂಭೀರ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ.

- Advertisement -

ಹಿಮಾಚಲ ಪ್ರದೇಶ ಎಲೆಕ್ಷನ್ ವಾಚ್ ಮತ್ತು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಎಲ್ಲಾ 412 ಅಭ್ಯರ್ಥಿಗಳ ಅಪರಾಧ ಹಿನ್ನೆಲೆ, ಹಣಕಾಸು, ಶಿಕ್ಷಣ, ಲಿಂಗ ಹಾಗೂ ಇತರ ವಿಷಯಗಳ ಬಗ್ಗೆ ವಿಶ್ಲೇಷಣೆ ನಡೆಸಿ ಗುರುವಾರ ವರದಿ ಪ್ರಕಟಿಸಿದೆ.

ಹಿಮಾಚಲ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎಲ್ಲಾ ಪ್ರಮುಖ ಪಕ್ಷಗಳು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿಕೊಂಡಿರುವ 18% ರಿಂದ 64% ಅಭ್ಯರ್ಥಿಗಳಿಗೆ ಟಿಕೆಟ್ ನೀಡಿವೆ. 412 ಅಭ್ಯರ್ಥಿಗಳ ಪೈಕಿ 201 ಮಂದಿ ರಾಷ್ಟ್ರೀಯ ಪಕ್ಷಗಳಿಂದ, 67 ಮಂದಿ ರಾಜ್ಯ ಪಕ್ಷಗಳಿಂದ, 45 ಮಂದಿ ನೋಂದಾಯಿತ ಪಕ್ಷಗಳಿಂದ ಮತ್ತು 99 ಮಂದಿ ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದಾರೆ.

- Advertisement -

ಕಣದಲ್ಲಿರುವ ಶೇ 23ರಷ್ಟು (94 ಮಂದಿ) ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾರೆ. ಇಬ್ಬರು ಕೊಲೆ ಆರೋಪ ಹೊತ್ತಿದ್ದಾರೆ. ಮೂವರು ಕೊಲೆ ಯತ್ನದ ಆರೋಪಿಗಳು ಹಾಗೂ ಐವರು ಅಭ್ಯರ್ಥಿಗಳು ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ ಆರೋಪ ಹೊಂದಿದ್ದಾರೆ. ಶೇ 55ರಷ್ಟು ಅಭ್ಯರ್ಥಿಗಳು ಕೋಟ್ಯಧಿಪತಿಗಳು ಎಂದು ವರದಿ ತಿಳಿಸಿದೆ.



Join Whatsapp