ಇಸ್ರೇಲ್ ನ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದ ಬೆಂಜಮಿನ್ ನೆತನ್ಯಾಹುರನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ

Prasthutha|

ನವದೆಹಲಿ: ಇಸ್ರೇಲ್ ನ ಸಾರ್ವತ್ರಿಕ ಚುನಾವಣೆಯಲ್ಲಿ ಬೆಂಜಮಿನ್ ನೆತನ್ಯಾಹು ಅವರ ಲಿಕುಡ್ ಪಕ್ಷವು ಗೆಲುವು ದಾಖಲಿಸಿದ್ದು, ನೆತನ್ಯಾಹು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

- Advertisement -

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ,  ಚುನಾವಣೆಯಲ್ಲಿ ಗೆಲುವು ಸಾಧಿಸಿದ ನನ್ನ ಸ್ನೇಹಿತ ನೆತನ್ಯಾಹು ಅವರಿಗೆ ಅಭಿನಂದನೆಗಳು. ಭಾರತ-ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಗಟ್ಟಿಗೊಳಿಸುವತ್ತ ನಮ್ಮ ಜಂಟಿ ಪ್ರಯತ್ನಗಳನ್ನು ಮುಂದುವರಿಸಲು ನಾನು ಎದುರು ನೋಡುತ್ತಿದ್ದೇನೆ ಎಂದರು.

ಅಲ್ಲದೆ ಉಭಯ ದೇಶಗಳ ಕಾರ್ಯತಂತ್ರದ ಪಾಲುದಾರಿಕೆಗೆ ಆದ್ಯತೆ ನೀಡಿದ ಯಾಯಿರ್ ಲ್ಯಾಪಿಡ್ ಅವರಿಗೆ ಧನ್ಯವಾದ ತಿಳಿಸಿರುವ ಪ್ರಧಾನಿ ಮೋದಿ, ನಮ್ಮ ಜನರ ಪರಸ್ಪರ ಪ್ರಯೋಜನಕ್ಕಾಗಿ ನಮ್ಮ ಫಲಪ್ರದ ವಿಚಾರ ವಿನಿಮಯವನ್ನು ಮುಂದುವರಿಸಲು ನಾನು ಆಶಿಸುತ್ತೇನೆ ಎಂದು ತಿಳಿಸಿದರು.

- Advertisement -

ಒಟ್ಟು 120 ಸ್ಥಾನಗಳಲ್ಲಿ ನೆತನ್ಯಾಹು ನೇತೃತ್ವದ ಬಲಪಂಥೀಯ ಪಕ್ಷಗಳು 64 ಸ್ಥಾನಗಳಲ್ಲಿ ಜಯಭೇರಿ ಸಾಧಿಸಿದ್ದು, ಅಭೂತಪೂರ್ವ ಗೆಲುವಿನೊಂದಿಗೆ ಮತ್ತೆ ಅಧಿಕಾರಕ್ಕೇರಿದೆ.

ಈವರೆಗೆ ಇಸ್ರೇಲಿ ಪ್ರಧಾನಿಯಾಗಿದ್ದ ಯಾಯಿರ್ ಲ್ಯಾಪಿಡ್ ಗುರುವಾರ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಸೋಲನ್ನು ಒಪ್ಪಿಕೊಂಡಿದ್ದು, ಬಲಪಂಥೀಯ ಪಕ್ಷಗಳ ಒಕ್ಕೂಟವು ಮುಂದಿನ ಸರ್ಕಾರವನ್ನು ರಚಿಸಲು ಮತ್ತು ದೇಶವನ್ನು ಕಾಡುತ್ತಿರುವ ರಾಜಕೀಯ ಬಿಕ್ಕಟ್ಟನ್ನು ಕೊನೆಗೊಳಿಸಲು ಸಂಸತ್ತಿನಲ್ಲಿ ಬಹುಮತವನ್ನು ಪಡೆದುಕೊಂಡಿರುವ ವಿರೋಧ ಪಕ್ಷದ ನಾಯಕ ಬೆಂಜಮಿನ್ ನೆತನ್ಯಾಹು ಅವರನ್ನು ಅಭಿನಂದಿಸಿದ್ದಾರೆ.



Join Whatsapp