ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ: ಶಾಲೆ ಮುಚ್ಚಲು ಸಿಎಂ ಆದೇಶ

Prasthutha|

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಕಡಿಮೆಯಾಗದ ಹಿನ್ನೆಲೆಯಲ್ಲಿ ಶನಿವಾರದಿಂದ ಪ್ರಾಥಮಿಕ ಶಾಲೆ ಮುಚ್ಚಲು ಸೂಚಿಸಲಾಗಿದೆ.

- Advertisement -


ಮಾತ್ರವಲ್ಲದೆ, ವಿದ್ಯಾರ್ಥಿಗಳಿಗೆ ಕ್ರೀಡೆ ಅಥವಾ ಸಭೆಗಳಂತಹ ಹೊರಾಂಗಣ ಚಟುವಟಿಕೆಗಳನ್ನು ಎಲ್ಲಾ ಶಾಲೆಗಳಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.


ಎಲ್ಲಾ ಶಾಲೆಗಳಲ್ಲಿ 8ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಬೋಧನೆಗಾಗಿ ಆನ್ ಲೈನ್ ಕ್ಲಾಸ್ ತೆಗೆದುಕೊಳ್ಳಲು ಸೂಚಿಸಲಾಗಿದೆ. 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಸಾಧ್ಯವಾದಷ್ಟು ಆನ್ ಲೈನ್ ಮೋಡ್ ಗೆ ಬದಲಾಯಿಸಲು ಸೂಚಿಸಲಾಗಿದೆ.
ಗುರುವಾರ ವಾಯು ಗುಣಮಟ್ಟ ಸೂಚ್ಯಂಕ ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದಲ್ಲಿ ತೀವ್ರವಾಗಿ ಕುಸಿದಿದೆ. ಪಶ್ಚಿಮ ಉತ್ತರ ಪ್ರದೇಶದ ದೆಹಲಿಗೆ ಹೊಂದಿಕೊಂಡಿರುವ ಜಿಲ್ಲೆಯ ಭಾಗಗಳಲ್ಲಿ ದಟ್ಟವಾದ ಹೊಗೆ ಆವರಿಸಿದೆ.



Join Whatsapp