ಕರಾವಳಿ ಸೇರಿ ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ: ಹಳದಿ ಅಲರ್ಟ್ ಘೋಷಣೆ

Prasthutha|

ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಎರಡು ದಿನ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಣೆ ಮಾಡಿದೆ.

- Advertisement -


ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಇನ್ನೆರಡು ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ 2 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.


ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.



Join Whatsapp