ಬಂಡೆಮಠದ ಸ್ವಾಮಿ ಆತ್ಮಹತ್ಯೆ ಪ್ರಕರಣ: ಆರೋಪಿಗಳಿಗೆ 10 ದಿನ ನ್ಯಾಯಾಂಗ ಬಂಧನ

Prasthutha|

ಬೆಂಗಳೂರು: ಬಂಡೆಮಠದ ಬಸವಲಿಂಗ ಸ್ವಾಮಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ನ. 15ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

- Advertisement -


ಮೂವರು ಆರೋಪಿಗಳಿಗೆ ಶನಿವಾರ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆ ಮಾಗಡಿಯ 1ನೇ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಲಾಯಿತು. ಒಂದನೇ ಹೆಚ್ಚುವರಿ ನ್ಯಾಯಾಧೀಶ ಎಂ ಧನಲಕ್ಷಿ ಮೂವರಿಗೂ ನ.15ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.


ಪ್ರಕರಣದ ಎ1 ಆರೋಪಿ ಕಣ್ಣೂರು ಮಠದ ಡಾ. ಮೃತ್ಯುಂಜಯಶ್ರೀ, ಎ3 ಆರೋಪಿ ಮಹದೇವಯ್ಯನನ್ನು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ರವಾನೆ ಮಾಡಲಾಗಿದ್ದು, ಎ2 ಆರೋಪಿ ನೀಲಾಂಬಿಕೆಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಅಲ್ಲದೆ, ಪ್ರಕರಣದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿರುವ ಶಂಕೆ ಇದ್ದು ಪೊಲೀಸರ ತನಿಖೆ ಮುಂದುವರಿದಿದೆ.



Join Whatsapp